spot_img
Sunday, April 12, 2026
spot_img

ವಂಡಬಳ್ಳಿ ಜಯರಾಮ ಶೆಟ್ಟಿಯವರಿಗೆ ಯುವ ಬಂಟರ ಸಂಘದ ‘ದಶಮ ಸಂಭ್ರಮ ಪ್ರಶಸ್ತಿ’

ಕುಂದಾಪುರ: ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮದ ಎರಡನೇ ಕಾರ್ಯಕ್ರಮದ ಅಂಗವಾಗಿ ನೀಡುವ ದಶಮ ಸಂಭ್ರಮ ಪ್ರಶಸ್ತಿಗೆ ಧಾರ್ಮಿಕ ಕ್ಷೇತ್ರ ವಿಭಾಗದಲ್ಲಿ ವಂಡಬಳ್ಳಿ ಜಯರಾಮ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ, ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಆ.28 ರವಿವಾರ ಬೆಳಿಗ್ಗೆ 9.30ಕ್ಕೆ ಕೋಟೇಶ್ವರದ ಯುವ ಮೆರಿಡಿಯನ್ ಹಾಲ್‌ನಲ್ಲಿ ನಡೆಯಲಿದೆ.

ವಂಡಬಳ್ಳಿ ಜಯರಾಮ ಶೆಟ್ಟಿಯವರು ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ 13 ವರ್ಷ ಧರ್ಮದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಕುಂದೇಶ್ವರ ದೇವಸ್ಥಾನಲ್ಲಿ ಟ್ರಸ್ಟಿಯಾಗಿ 5 ವರ್ಷ ಸೇವೆ ಸಲ್ಲಸಿದ್ದಾರೆ. ಮಾರಣಕಟ್ಟೆ ತೆಂಕೂರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಕಳೆದ 13 ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಮಾರಣಕಟ್ಟೆ ಇಲ್ಲಿ ಕಳೆದ 37 ವರ್ಷಗಳಿಂದ ಶಬರಿಮಲೈ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಪರಿಸರದ ಹಲವಾರು ದೇವಸ್ಥಾನಗಳ ಜೀರ್ಣೋದ್ದಾರ ಕಾರ್ಯ, ನಾಗಮಂಡಲೋತ್ಸವ, ಬ್ರಹ್ಮಕಲಶೋತ್ಸವ ಸಹಿತ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತಾ ಬಂದಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿಯೂ ಗುರುತಿಸಿಕೊಂಡಿರುವ ಇವರು, 1994-2000ನೇ ಇಸವಿ ತನಕ ವಂಡ್ಸೆ ಗ್ರಾ.ಪಂ. ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!