spot_img
Sunday, April 12, 2026
spot_img

ಕೈಲ್ಕೆರೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕೈಲ್ಕೆರೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಂಘದ ಅಧ್ಯಕ್ಷೆ ಚೈತ್ರಾ ವಿ. ಅಡಪ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಮಹಾಸಭೆಯಲ್ಲಿ ಸಂಘದ ಸದಸ್ಯರಿಗೆ ಶೇ.65 ಬೋನಸ್ ಹಾಗೂ ಶೇ. 20 ಡಿವಿಡೆಂಟ್ ಹಂಚಿಕೆ ಮಾಡಲಾಯಿತು. ಸಂಘದಲ್ಲಿ ಹಾಲು ಶೇಖರಣೆ ಮಾಡುವ ಸದಸ್ಯರ ಮಕ್ಕಳಿಗೆ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಶ್ವತ ಫಲಕ ಮತ್ತು ವಿಶೇಷವಾಗಿ ಗೌರವಿಸಲಾಯಿತು. ಅದೇ ಸಂದರ್ಭದಲ್ಲಿ ಸಂಘಕ್ಕೆ ಅತೀ ಹೆಚ್ಚು ಹಾಲು ನೀಡುತ್ತಿರುವ 9 ಜನ ಸದಸ್ಯ ಹೈನುಗಾರನ್ನು ಗುರುತಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತರಣಾ ಅಧಿಕಾರಿ ಉಮೇಶ್ ಕುಂದರ್ ಉಪಸ್ಥಿತರಿದ್ದರು. ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರು ಹಾಜರಿದ್ದರು.

ಕಾರ್ಯಕ್ರಮವನ್ನು ಸಂಘದ ಕಾರ್ಯದರ್ಶಿ ಸುಲೇಖಾ ಶೇಖರ್ ಶೆಟ್ಟಿ ನಿರೂಪಿಸಿದರು. ನಾಗರತ್ನಾ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!