spot_img
Sunday, April 12, 2026
spot_img

ಎಲ್ಲಾ ಶಾಲೆಗಳಲ್ಲೂ ಕ್ರೀಡೆಗೆ ಹೆಚ್ಚಿನ ಪ್ರಾಶಸ್ತ್ಯ- ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ

ಗಂಗೊಳ್ಳಿ : ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ನೀಡಿ ಅವರನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಕ್ರೀಡೆಗಳಿಗೆ ಭಾಗವಹಿಸಲು ಸಜ್ಜುಗೊಳಿಸಬೇಕು. ಬೈಂದೂರು ವಲಯದಲ್ಲಿ ಎಲ್ಲಾ ಶಾಲೆಗಳಲ್ಲೂ ಕ್ರೀಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದ್ದು, ಗ್ರಾಮೀಣ ಪ್ರದೇಶದ ಪ್ರತಿಭೆ ಗುರುರಾಜ್ ಪೂಜಾರಿ ದೇಶ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಹೆಮ್ಮೆಯ ವಿಷಯ. ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಸರ್ವಾಂಗೀಣ ಅಭಿವೃದ್ಧಿ ಸಾಧಿಸುತ್ತಿದ್ದು, ಶಿಕ್ಷಕರ ಪರಿಶ್ರಮ ಹಾಗೂ ಪೋಷಕರ ಸಹಕಾರ ಶಾಲೆಯ ಪ್ರಗತಿಗೆ ಕಾರಣವಾಗಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಇವರ ಆಶ್ರಯಲ್ಲಿ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಬೈಂದೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಯ ಎಸ್‌ಡಿ‌ಎಂಸಿ ಅಧ್ಯಕ್ಷ ನಾರಾಯಣ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಮೇಸ್ತ, ಕಾರ್ಯದರ್ಶಿ ರಾಜೀವ ಶ್ರೀಯಾನ್. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಗುಜ್ಜಾಡಿ ಗ್ರಾಪಂ ಸದಸ್ಯರಾದ ಹರೀಶ ಮೇಸ್ತ, ತುಂಗಾ ಪೂಜಾರ್‍ತಿ, ಶ್ರೀಧರ, ಎಸ್‌ಡಿ‌ಎಂಸಿ ಉಪಾಧ್ಯಕ್ಷೆ ಇಂದಿರಾ ಪೂಜಾರಿ, ಶಿಕ್ಷಣ ಸಂಯೋಜಕರಾದ ಸತ್ಯನಾ ಕೊಡೇರಿ, ಯೋಗೀಶ್, ಬೈಂದೂರು ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಬಾಡ, ಶಾಲೆಯ ಮುಖ್ಯ ಶಿಕ್ಷಕ ಆನಂದ ಕೆ., ದೈಹಿಕ ಶಿಕ್ಷಣ ಶಿಕ್ಷಕಿ ವಿಶಾಲಾಕ್ಷಿ ಜಿ.ಕೆ. ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪೂರ್ವಿಕಾ ಸ್ವಾಗತಿಸಿದರು. ಬೈಂದೂರು ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿಯರಾದ ಮಾಧವಿ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಆಶಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!