spot_img
Sunday, April 12, 2026
spot_img

ನೇರಳಕಟ್ಟೆಯಲ್ಲಿ ಎರಡು ವಾಮನ ಮುದ್ರೆ ಕಲ್ಲು ಪತ್ತೆ

ಕುಂದಾಪುರ: ತಾಲೂಕಿನ ಕರ್ಕುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇರಳಕಟ್ಟೆ ಅರಳಿಕಟ್ಟೆಯ ಬಾವಿಕಟ್ಟೆಯ ಬಳಿ ಹಾಗೂ ನೇರಳಕಟ್ಟೆಯ ಜಾಡ್ಕಟ್ಟು ರಾಮ ಮೊಗವೀರ ಇವರ ಮನೆಯ ಬಳಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಮಿಪದಲ್ಲಿ ವಾಮನ ಮುದ್ರಿಕೆಯ ಕಲ್ಲು ಪತ್ತೆಯಾಗಿದೆ.

ಶೈವರು, ವೈಷ್ಣವರು, ಜೈನರು ಆರಾಧನೆಗೆ ಸಂಬಂಧಿಸಿದ ಹಾಗೂ ಅವರ ಆರಾಧನೆಗೆ ಗಡಿಗಳನ್ನು ಗುರುತಿಸುವುದು ಸಹಜ. ಶೈವರ ಗಡಿಗಳಿಗೆ ಲಿಂಗ ಮುದ್ರಿಕೆ ಕಲ್ಲು ಅಥವಾ ಶೈವ ಮುದ್ರಿಕೆ ಕಲ್ಲು, ವೈಷ್ಣವರ ಗಡಿಗಳಿಗೆ ವಾಮನ ಮುದ್ರಿಕೆ ಕಲ್ಲು, ಜೈನರ ಗಡಿಗಳಿಗೆ ಮುಕ್ಕೋಡೆ ಕಲ್ಲುಗಳನ್ನು ಹಾಕುತ್ತಿದ್ದರು.ಈ ಮೂಲಕ ಬಹಳ ಸ್ಪಷ್ಟವಾಗಿ ಅವರವರ ಗಡಿಗಳನ್ನು ಗುರುತಿಸಲು ಸಾಧ್ಯವಾಗುತ್ತಿತ್ತು.

ನೇರಳಕಟ್ಟೆಯ ಎರಡು ವಾಮನ ಮುದ್ರಿಕೆಯ ಕಲ್ಲುಗಳಲ್ಲಿ ಸೂರ್ಯ ಚಂದ್ರ ಇರುವ ತನಕ ಅಜರಾಮರವಾಗಿರಲಿ ಎಂದು ಸಂದೇಶ ಸಾರುವಂತಹ ಸೂರ್ಯ ಹಾಗೂ ಚಂದ್ರ ಶಿಲ್ಪ ಕಲೆಯೊಂದಿಗೆ ವ್ಯಕ್ತಿ ಅಂದರೆ ವಾಮನ ಅವರ ಒಂದು ಕೈಯಲ್ಲಿ ಕೊಡೆ ಇನ್ನೊಂದು ಕೈಯಲ್ಲಿ ಕಮಂಡಲವಿದೆ .ಇದು ವಾಮನ ಶಿಲ್ಪ ಕಲೆಯಲ್ಲಿ ಸಹಜವಾಗಿ ಕಂಡು ಬರುತ್ತದೆ.

ಅಂತೆಯೇ ವಾಮನ ಮುದ್ರಿಕೆಯ ಕಲ್ಲಿನ ಅಣತಿ ದೂರದಲ್ಲಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನವಿದೆ. ಈ ವಾಮನ ಮುದ್ರಿಕೆ ಕಲ್ಲು ಶ್ರೀ ಲಕ್ಷ್ಮೀ ವೆಂಕಟರಮಣ ದೇಗುಲದ ಇತಿಹಾಸದ ಮೇಲೆ ಬೆಳಕು ಚೆಲ್ಲುವಂತಿದೆ.ಈ ಹಿಂದೆ ನೇರಳಕಟ್ಟೆಯ ಬಾವಿ ಕಟ್ಟೆ ಬಳಿ,ಕಂದಾವರದ ಶ್ರೀ ವೀರಾಂಜನೇಯ ದೇವಾಲಯದ ಬಳಿ,ನಂದ್ರೋಳ್ಳಿ ಶ್ರೀ ಲಕ್ಷ್ಮೀನಾರಾಯಣ ದೇವಾಲಯದ ಬಳಿ ವಾಮನ ಮುದ್ರಿಕೆ ಕಲ್ಲು ಕಂಡು ಬಂದಿದೆ.

ಈ ವಾಮನ ಮುದ್ರಿಕೆ ಕಲ್ಲುಗಳನ್ನು ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸಂಚಾಲಕ ಪ್ರದೀಪ ಕುಮಾರ್ ಬಸ್ರೂರು ಹಾಗೂ ಸಂತೋಷ್ ನೇರಳಕಟ್ಟೆ ಇವರು ಪತ್ತೆ ಹಚ್ಚಿದ್ದಾರೆ.ಇವರಿಗೆ ಕರ್ಕುಂಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸಂತೋಷ್ ಪೂಜಾರಿ, ಸುಕುಮಾರ್ ನೇರಳಕಟ್ಟೆ, ಜಯರಾಮ ನೇರಳಕಟ್ಟೆ, ಗಿರಿ ಪೂಜಾರಿ ನೇರಳಕಟ್ಟೆ ಸಹಕರಿಸಿದ್ದಾರೆ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!