Thursday, November 21, 2024

ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ B++ ಗ್ರೇಡ್ ಮಾನ್ಯತೆ

ಕುಂದಾಪುರ : ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ ಯುಜಿಸಿ ನ್ಯಾಕ್ ಸಂಸ್ಥೆಯು B++ ಗ್ರೇಡ್ ಮಾನ್ಯತೆ ನೀಡಿದೆ. ಹೊಸ ಮಾನ್ಯತಾ ಕ್ರಮದಲ್ಲಿ ಸಿಜಿಪಿ‌ಎ 2.92/4 ಸಂಸ್ಥೆ ಪಡೆದಿದ್ದು, ಮಂಗಳೂರು ವಿ.ವಿ. ವ್ಯಾಪ್ತಿಗೆ ಒಳಪಟ್ಟಿರುವ ಅನುದಾನ ರಹಿತ ಶಿಕ್ಷಣ ಸಂಸ್ಥೆಯೊಂದು ಕೇವಲ 11 ವರ್ಷಗಳಲ್ಲಿ ಮಾಡಿದ ಸಾಧನೆಗೆ ಮೊಟ್ಟ ಮೊದಲ ಬಾರಿಗೆ B++ Grade ಬಂದಿರುವುದು ಬಹಳ ವಿಶೇಷವಾಗಿದೆ ಎಂಬುದಾಗಿ ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡಿದೆ. ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. 130 ವಿದ್ಯಾರ್ಥಿಗಳೊಂದಿಗೆ ಹನ್ನೊಂದು ವರ್ಷಗಳ ಹಿಂದೆ ಆರಂಭಗೊಂಡ ಸಂಸ್ಥೆಯಲ್ಲಿ ಪ್ರಸ್ತುತ 1400 ಕಲಿಕಾರ್ಥಿಗಳಿದ್ದಾರೆ ಎಂಬುದು ಸಂಸ್ಥೆಯ ಸಾಧನೆಯ ಹಾದಿಯ ಹೆಗ್ಗುರುತು.

ಕ್ಯಾಂಪಸ್ ಆಯ್ಕೆ : ವಿದ್ಯಾರ್ಥಿಗಳು ವಿವಿಧ ಪ್ರತಿಷ್ಠಿತ ಕಂಪೆನಿಗಳಿಗೆ ಆಯ್ಕೆ, ಸತತ ಹನ್ನೊಂದು ವರ್ಷಗಳಿಂದ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿ.ವಿ. ಅಂತರ್ ಕಾಲೇಜು ಕ್ರೀಡಾ ಸ್ಪರ್ಧೆಗಳ ಆಯೋಜನೆ, ಮಂಗಳೂರು ವಿ.ವಿ. ಮಟ್ಟದ ಸ್ಪರ್ಧೆಗಳಲ್ಲಿ ಗಮನ ಸೆಳೆದ ಸಾಂಸ್ಕೃತಿಕ ತಂಡ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಬರವಣಿಗೆಯ ಆಸಕ್ತಿಗೆ ಪ್ರೋತ್ಸಾಹ ನೀಡುವ ವಾಲ್ ಮ್ಯಾಗಜಿನ್ (ಭಿತ್ತಿ ಪತ್ರಿಕೆ) ಧ್ವನಿ, ವಾರ್ಷಿಕ ಸಂಚಿಕೆ ಶಿಖರ, ಕ್ಯಾಂಪಸ್ ವಾಸ್-ದ್ವೈವಾರ್ಷಿಕ ನ್ಯೂಸ್ ಬುಲೆಟಿನ್ ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಬಿತ್ತರಿಸುತ್ತಾ ಬಂದಿದೆ.

ಬಿ.ಕಾಂ.ನಲ್ಲಿ ನಾಲ್ಕು ವಿಭಾಗಗಳು, ಬಿ.ಕಾಂ.ನೊಂದಿಗೆ CA/CS, ಬಿಸಿ‌ಎಯಲ್ಲಿ ಎರಡು ಹಾಗೂ ಬಿ.ಬಿ.ಎ. ಮತ್ತು ಬಿ.ಎಸ್ಸಿ.ಯಲ್ಲಿ ಒಂದು ವಿಭಾಗವಿದೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದಂತೆ (IBPS) ತರಬೇತಿ, ಸರ್ಟಿಫಿಕೇಟ್ ಕೋರ್ಸ್‌ಗಳು, ವಿದ್ಯಾರ್ಥಿಗಳ ವಿವಿಧ ಅಭಿರುಚಿಗೆ ತಕ್ಕಂತೆ 20 ವಿವಿಧ ವೇದಿಕೆಗಳು, ಉತ್ತಮ ಗ್ರಂಥಾಲಯ, ಪ್ರಯೋಗಾಲಯಗಳು ಮತ್ತು ೧೫೦೦ ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಸಭಾಂಗಣ, ಪೋಷಕ-ಶಿಕ್ಷಕರ ನಿರಂತರ ಸಂಪರ್ಕ, ಚರ್ಚೆ ಮತ್ತು ಪೋಷಕರ ಸಲಹೆಗಳಿಗೆ ಸ್ಪಂದನೆ, ಹೆಮ್ಮೆಯ ಪ್ರಾಕ್ತನ ವಿದ್ಯಾರ್ಥಿ ಸಂಘ ಹೀಗೆ ಬಹುಬಗೆಯ ಕಾರ್ಯಚಟುವಟಿಕೆಗಳಲ್ಲಿ ಸಂಸ್ಥೆ ಗುರುತಿಸಿಕೊಂಡಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!