spot_img
Sunday, April 12, 2026
spot_img

ಕೊಲ್ಲೂರು: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಕೊಲ್ಲೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೈಂದೂರು ಮತ್ತು ಸಂಪನ್ಮೂಲ ಕೇಂದ್ರ ಬೈಂದೂರು ಹಾಗೂ ಶ್ರೀ ಮೂಕಾಂಬಿಕಾ ದೇವಳದ ಅನುದಾನಿತ ಪ್ರೌಢಶಾಲೆ ಕೊಲ್ಲೂರು ವತಿಯಿಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಆಡಳಿತ ಮಂಡಳಿಯ ಸದಸ್ಯರಾದ ಅತುಲ್ ಕುಮಾರ್ ಶೆಟ್ಟಿ ಹಾಗೂ ಜಯಾನಂದ ಹೋಬಳಿದಾರ್ ಜಂಟಿಯಾಗಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿಭಾ ಕಾರಂಜಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಿ ಆರ್ ಪಿ ವಿಶ್ವನಾಥ್ ಮೇಸ್ತ ಅವರನ್ನು ಸನ್ಮಾನಿಸಲಾಯಿತು.

ಸಮನ್ವಯಾಧಿಕಾರಿ ಕರುಣಾಕರ್ ಶೆಟ್ಟಿ ಪ್ರಸ್ತಾವಿಕ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೆ ರಮೇಶ್ ಗಾಣಿಗ, ಗ್ರೀಷ್ಮಾ ಗಿರಿಧರ್ ಭಿಡೆ, ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ರಾಮಕೃಷ್ಣ ದೇವಾಡಿಗ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಪ್ರಕಾಶ್ ಶೆಟ್ಟಿ, ಕೊಲ್ಲೂರು ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಯೋಗೇಶ್ ಭಟ್ , ಕೊಲ್ಲೂರು ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶಾರದಾ , ವಂಡ್ಸೆ ಕ್ಲಸ್ಟರ್ ಮಟ್ಟದ ಸಿ ಆರ್ ಪಿ ಆದ ನಾಗರಾಜ್ ಶೆಟ್ಟಿ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಕಾರ್ಯಕ್ರಮ ನಿರೂಪಿಸಿದರು, ಸಿ ಆರ್ ಪಿ ವಿಶ್ವನಾಥ್ ಮೇಸ್ತ ಸ್ವಾಗತಿಸಿದರು, ಮುಖ್ಯೋಪಾಧ್ಯಾಯರಾದ ನಾಗರಾಜ್ ಭಟ್ ವಂದಿಸಿದರು. ತದನಂತರ ಮಕ್ಕಳ ವಿವಿಧ ಸ್ಪರ್ಧೆಗಳು ನಡೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!