spot_img
Sunday, April 12, 2026
spot_img

ಗಂಗೊಳ್ಳಿ : ಚಿನ್ನದ ಪದಕ ವಿಜೇತೆ ವೈಷ್ಣವಿ ಗೋಪಾಲ್ ಅವರಿಗೆ ಸನ್ಮಾನ

ಗಂಗೊಳ್ಳಿ: ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಇವರ ವತಿಯಿಂದ 12ನೇ ವರ್ಷದ ವಿದ್ಯಾಗಣಪತಿ ಉತ್ಸವದ ಅಂಗವಾಗಿ ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ಗುರುವಾರ ಜರಗಿದ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಬಿ.ಎ ಪದವಿಯಲ್ಲಿ ಪ್ರಥಮ ರ್‍ಯಾಂಕ್ ಹಾಗೂ ಚಿನ್ನದ ಪದಕ ಗಳಿಸಿದ ವೈಷ್ಣವಿ ಗೋಪಾಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಗಂಗೊಳ್ಳಿ ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಬೈಂದೂರಿನ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಉಪ್ಪುಂದ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮೇನೆಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ, ಮುಂಬೈನ ಹೋಟೆಲ್ ಉದ್ಯಮಿ ಗಂಗೊಳ್ಳಿ ಸುರೇಶ ಪೂಜಾರಿ ಕೋಟೆಬಾಗಿಲು ಮನೆ, ಯುವಕ ಮಂಡಲದ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ಪೂಜಾರಿ ಮತ್ತು ಕಾರ್ಯದರ್ಶಿ ನಾರಾಯಣ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!