spot_img
Sunday, April 12, 2026
spot_img

ದೈಹಿಕ ಶಿಕ್ಷಣ ಶಿಕ್ಷಕ, ಕ್ರೀಡಾ ವೀಕ್ಷಕ ವಿವರಣೆಗಾರ ಪ್ರಕಾಶ್ ಶೆಟ್ಟಿ ಬೆಳಗೋಡು ನಿಧನ

ಕುಂದಾಪುರ: ಮೊಳಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಜನಪ್ರಿಯ ಕ್ರೀಡಾ ವೀಕ್ಷಕ ವಿವರಣೆಗಾರ,ವಿಶ್ವ ಕಲಾ ರತ್ನ ಪ್ರಶಸ್ತಿ ಪುರಸ್ಕೃತ ಪ್ರಕಾಶ್ ಶೆಟ್ಟಿ ಬೆಳಗೋಡು (49ವ) ಅನಾರೋಗ್ಯದಿಂದ ಸೋಮವಾರ ನಿಧನರಾದರು.

ಪ್ರಕಾಶ್ ಶೆಟ್ಟಿ ಅಕಾಶವಾಣಿ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಅವಿಭಜಿತ ಜಿಲ್ಲೆಯ ಜನಪ್ರಿಯ ಕ್ರೀಡಾ ವೀಕ್ಷಕ ವಿವರಣೆಕಾರರಾಗಿದ್ದ ಅವರು ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಗಳನ್ನು ಆಯೋಜಿಸಿದ್ದರು. ಆನೇಕ ಕ್ರೀಡಾ ಸ್ಪರ್ಧೆಗಳನ್ನು ಸಂಘಟಿಸಿದ್ದರು.
ಪ್ರಕಾಶ್ ಶೆಟ್ಟಿ ವಾಲಿಬಾಲ್ ಆಟದ ಕಮೆಂಟರಿಗೆ ಜನಪ್ರಿಯರಾಗಿದ್ದರು. ಅವರು ಕ್ರೀಡಾಪಟುಗಳನ್ನು ಉತ್ತೇಜಿಸುತ್ತಿದ್ದ ಶೈಲಿ ಅದ್ಭುತವಾಗಿತ್ತು. ಯಕ್ಷಗಾನ, ನಾಟಕ, ಏಕಪಾತ್ರಾಭಿನಯ ಹೀಗೆ ಸಾಂಸ್ಕೃತಿಕ ಕ್ಷೇತ್ರದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಪುತ್ರರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!