spot_img
Sunday, April 12, 2026
spot_img

ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಸ್ಕರ್ ಫೆರ್ನಾಂಡೀಸ್ ಪ್ರಥಮ ಪುಣ್ಯತಿಥಿ ಆಚರಣೆ

ಕುಂದಾಪುರ, ಸೆ.13: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನೇತಾರ, ಕೇಂದ್ರ ಸರಕಾರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡೀಸ್ ಅವರ ಪ್ರಥಮ ಪುಣ್ಯತಿಥಿಯನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಕ್ಷದ ಕಛೇರಿಯಲ್ಲಿ ಆಚರಿಸಲಾಯಿತು.

ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಆಸ್ಕರ್ ಫೆರ್ನಾಂಡೀಸ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪುಷ್ಪರ್ಚನೆ ಸಲ್ಲಿಸಿದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಮಾತನಾಡಿ, ಕಾಂಗ್ರೆಸ್ ಪಕ್ಷದ ವಿವಿಧ ಮಜಲುಗಳಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ. ಸರಳ ಸಜ್ಜನ ರಾಜಕಾರಣಿಯಾಗಿ ಸಾಮಾನ್ಯ ಕಾರ್ಯಕರ್ತನ ಜೊತೆಗೆ ಉತ್ತಮ ಬಾಂಧವ್ಯ ಇರಿಸಿಕೊಂಡಿದ್ದ ಅವರು ಮಾದರಿ ರಾಜಕಾರಣಿಯಾಗಿದ್ದರು. ಅವರ ಆದರ್ಶ, ಆಡಳಿತ ವೈಖರಿ, ಉದಾತ್ತ ಮೌಲ್ಯಗಳನ್ನು ಹೊಂದಿದ್ದ ಅವರು ಧೀಮಂತ ವ್ಯಕ್ತಿಯಾಗಿದ್ದರು. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳಬೇಕು ಎಂದರು.

ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಬಿ.ಹಿರಿಯಣ್ಣ ಚಾತ್ರಬೆಟ್ಟು, ಶ್ಯಾಮಲ ಭಂಡಾರಿ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ, ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಾಕೋಬ್ ಡಿಸೋಜ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಐ.ಟಿ ಸೆಲ್ ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ದೀಪಕ್ ಕುಮಾರ್ ಶೆಟ್ಟಿ, ರೇವತಿ ಶೆಟ್ಟಿ,ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ ಶೇರೆಗಾರ್, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಮುನಾಫ್ ಕೋಡಿ, ಪುರಸಭಾ ಸದಸ್ಯರಾದ ಶ್ರೀಧರ್ ಶೇರಿಗಾರ್, ಚಂದ್ರಶೇಖರ್ ಖಾರ್ವಿ, ಅಶ್ಪಕ್ ಕೋಡಿ, ಲಕ್ಷ್ಮೀಬಾಯಿ ಪೂಜಾರಿ, ಪ್ರಭಾವತಿ ಶೆಟ್ಟಿ, ಗಂಗಾಧರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ವಿಜಯಧರ್ ಕೆ.ವಿ, ಜೆಸಿಂತಾ ಡಿ ಮೆಲ್ಲೊ, ಜಾನಕಿ ಬಿಲ್ಲವ, ಅಣ್ಣಯ್ಯ ಪುತ್ರನ್, ಅಶ್ವತ್ ಕುಮಾರ, ಆಶಾ ಕರ್ವಾಲೋ, ಅಭಿಜಿತ್ ಪೂಜಾರಿ, ಮಾಜಿ ಪುರಸಭೆ ಅಧ್ಯಕ್ಷ ಹರೋನ್ ಸಾಹೇಬ್, ಕೇಶವ್ ಭಟ್, ಜಯರಾಮ್ ಶೆಟ್ಟಿ, ರಾಕೇಶ್ ಶೆಟ್ಟಿ, ಸಚಿನ್ ಕುಮಾರ್, ಅಶೋಕ್ ಸುವರ್ಣ, ಜೋಸೆಫ್ ರೆಬೆಲ್ಲೊ, ಸುರೇಶ್ ಚಾತ್ರಬೆಟ್ಟು, ಎಡೊಲ್ಪ ಡಿ ಕೋಸ್ಟ, ವಿವೇಕಾನಂದ, ಶ್ರೀನಿವಾಸ್ ಶೆಟ್ಟಿ, ಶ್ರೀಧರ್ ಪೂಜಾರಿ, ಸುನಿಲ್ ಕುಮಾರ್ ಶೆಟ್ಟಿ, ಸಂಗೀತ ಮೊದಲಾದವರು ಉಪಸ್ಥಿತರಿದ್ದರು

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ತಾ ಕಾರ್ಯಕ್ರಮ ನಿರ್ವಹಿಸಿ, ಕೋಣಿ ನಾರಾಯಣ ಆಚಾರ್ ಸ್ವಾಗತಿಸಿದರು. ಸುನಿಲ್ ಪೂಜಾರಿ ಕೋಡಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!