Sunday, September 8, 2024

ನೀಟ್ ಪರೀಕ್ಷೆ: ಸುಪ್ರಭ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಸಾಧನೆ

ಕುಂದಾಪುರ: ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಪ್ರಭ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೀಟ್/ಸಿ‌ಇಟಿ ಅಕಾಡೆಮಿಯ ವಿದ್ಯಾರ್ಥಿನಿ ಪಲ್ಲವಿ 720ರಲ್ಲಿ 568 ಅಂಕಗಳಿಸುವುದರೊಂದಿಗೆ ಕುಂದಾಪುರ ತಾಲೂಕಿನಲ್ಲೇ ಶ್ರೇಷ್ಠ ಸಾಧನೆ ಗೈದಿದ್ದಾರೆ.

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಅಂಗ ಸಂಸ್ಥೆಯಾಗಿರುವ ಸುಪ್ರಭ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯು ಸಿ‌ಇಟಿ/ ನೀಟ್ ಪರೀಕ್ಷೆಗೆ ಗುಣಮಟ್ಟದ ತರಬೇತಿಯನ್ನು ಹೈದರಾಬಾದ್, ಮೂಡುಬಿದಿರೆ, ಮಂಗಳೂರು, ಮುಂಬೈ ಮುಂತಾದ ಭಾಗಗಳ ಅನುಭವಿ ಶಿಕ್ಷಕರಿಂದ ತರಬೇತಿ ನೀಡಿ ಪರೀಕ್ಷೆಗೆ ಸಿದ್ಧಗೊಳಿಸಲಾಗಿತ್ತು ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಸ್ಥೆಯ ವತಿಯಿಂದ ಸಾಧಕಿ ಪಲ್ಲವಿ ಅವರನ್ನು ಸನ್ಮಾನಿಸಲಾಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!