Sunday, September 8, 2024

ನೆಟ್ ಬಾಲ್ ಪಂದ್ಯಾಟ: ಕೊಲ್ಲೂರು ಮೂಕಾಂಬಿಕಾ ಪ್ರೌಢಶಾಲಾ ಬಾಲಕ ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ

ಕೊಲ್ಲೂರು: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ ಬಾಲಕಿಯರ ನೆಟ್ ಬಾಲ್ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ಬಾಲಕ ಹಾಗೂ ಬಾಲಕಿಯರ ತಂಡ ಸತತ 13ನೇ ಬಾರಿಗೆ ಪ್ರಥಮ ಸ್ಥಾನ ಪಡೆದು, ಹಾಸನದಲ್ಲಿ ನಡೆಯಲಿರುವ ರಾಜ್ಯಮಟ್ಟದ ನೆಟ್ ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

ವಿಜೇತ ವಿದ್ಯಾರ್ಥಿಗಳೊಂದಿಗೆ ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್ ಭಟ್, ಹಿರಿಯ ಶಿಕ್ಷಕ ಕೃಷ್ಣ ಜಿ, ಶಾಲಾ ಸಹ ಶಿಕ್ಷಕರಾದ ಅಣ್ಣಪ್ಪ ನಾಯ್ಕ್, ಮಂಜುನಾಥ್, ರೇಖಾ, ಜ್ಯೋತಿಲಕ್ಷ್ಮಿ, ಪ್ರತಾಪ್ ಕುಮಾರ್, ವಿದ್ಯಾ ಹಾಗೂ ರಾಜ್ಯಮಟ್ಟದ ನೆಟ್‌ಬಾಲ್ ತೀರ್ಪುಗಾರ ಅವಿನಾಶ್ ಆಚಾರ್ಯ, ರಾಷ್ಟ್ರಮಟ್ಟದ ನೆಟ್‌ಬಾಲ್ ಆಟಗಾರ ಗಣೇಶ್ ಕೊಠಾರಿ, ರಾಜ್ಯಮಟ್ಟದ ನೆಟ್‌ಬಾಲ್ ಆಟಗಾರ ಪೃಥ್ವಿನ್ ಗಾಣಿಗ, ಕಬ್ಬಡಿ ಆಟಗಾರ ವಿನಾಯಕ ಆಚಾರ್ಯ ಉಪಸ್ಥಿತರಿದ್ದರು.

ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಬೋಧಕ, ಬೋಧಕೇತರ ವೃಂದದವರು ಮತ್ತು ಹಳೆ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!