spot_img
Monday, June 8, 2026
spot_img

ಕಬ್ಬಡಿ ಪಂದ್ಯಾಟ: ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೊಲ್ಲೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸೈಂಟ್ ಥೋಮಸ್ ಪದವಿ ಪೂರ್ವ ಕಾಲೇಜು ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಹೆಮ್ಮಾಡಿಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ, ಹೊಸಮಠ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ತರಬೇತಿ ನೀಡಿದ್ದರು. ವಿಜೇತ ವಿದ್ಯಾರ್ಥಿಗಳೊಂದಿಗೆ ಪ್ರಾಂಶುಪಾಲರಾದ ಅರುಣ್ ಪ್ರಕಾಶ್ ಶೆಟ್ಟಿ, ಉಪನ್ಯಾಸಕರಾದ ಗೋಪಾಲಕೃಷ್ಣ, ರಾಮ ನಾಯ್ಕ್, ಗೋಪಾಲ್ ದೇವಾಡಿಗ, ಉಪನ್ಯಾಸಕಿ ಎನ್ ಪೂರ್ಣಿಮಾ ಜೋಯಿಸ್, ದಿನಕರ್ ಶೆಟ್ಟಿ, ಯತೀಶ್ ಕುಮಾರ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಮತ್ತು ಹಳೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!