Sunday, September 8, 2024

ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು: ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕುಂದಾಪುರ: ಕುಂದಾಪುರ ತಾಲ್ಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ. ಇಲ್ಲಿ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಿತು.

ಉಡುಪಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿಯವರು ಪಂದ್ಯಾಟವನ್ನು ಉದ್ಘಾಟಿಸಿ, ಪಾಠದ ಜೊತೆಗೆ ಆಟವೂ ಕೂಡ ಅಷ್ಟೇ ಮುಖ್ಯವಾಗಿದೆ. ವಿದ್ಯಾರ್ಥಿಗಳು ಲವಲವಿಕೆಯಿಂದ ಭಾಗವಹಿಸಿದಾಗ ಆಟಕ್ಕೆ ಕಳೆಬರುತ್ತದೆ. ಸ್ಪರ್ಧಾರ್ಥಿಗಳು ಆಟದ ಕೊನೆಯವರೆಗೂ ತಂಡದ ಉತ್ಸಾಹವನ್ನು ಕಳೆದುಕೊಳ್ಳದೆ ಹುರುಪಿನೊಂದಿಗೆ ಪ್ರೇಕ್ಷಕರನ್ನು ರೋಮಾಂಚನಗೊಳಿಸುವಂತೆ ಆಟವಾಡಬೇಕೆಂದು ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಂ. ಮಹೇಶ್ ಹೆಗ್ಡೆಯವರು ಮಾತನಾಡಿ, ಶಿಕ್ಷಣ ಇಲಾಖೆಯು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ವಾಲಿಬಾಲ್ ಆಯೋಜಿಸಿದಕ್ಕೆ ಹೆಮ್ಮೆ ಎನಿಸುತ್ತದೆ. ಇಲ್ಲಿ ಆಟದಲ್ಲಿ ಯಾರೇ ಗೆಲ್ಲಲಿ ಯಾರೇ ಸೋಲಲಿ ನಮಗೆ ಭಾಗವಹಿಸಿದ ತೃಪ್ತಿ ಇರುತ್ತದೆ. ಸ್ಪರ್ಧಾತ್ಮಕ ದೃಷ್ಟಿಯಿಂದ ಆಡುವುದು ಸೂಕ್ತ, ಇದು ಜೀವನದಲ್ಲಿ ನಾವು ಬೆಳೆಯಲು ಸಹಕಾರಿಯಾಗುತ್ತದೆ. ಇಲ್ಲಿ ಆಡಿದ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಿಂದ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಆಡಬೇಕೆಂದು ಹರಸಿದರು.

ಸಭೆಯ ಅಧ್ಯಕ್ಷತೆಯನ್ನು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿಯವರು ಸ್ಪರ್ಧಾಳುಗಳನ್ನು ಉದ್ದೇಶಿಸಿ ಸ್ಪರ್ಧಾ ಮನೋಭಾವದಿಂದ ಆಟವನ್ನು ಆಡಿ ಸ್ಪರ್ಧೆಯ ನಿಯಮವನ್ನು ಅಚ್ಚುಕಟ್ಟಾಗಿ ಪಾಲಿಸಿ ಶಿಸ್ತು ಬದ್ಧರಾಗಿರಿ ಎಂದು ಆಟಗಾರರಿಗೆ ಶುಭಹಾರೈಸಿದರು.

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪಚಂದ್ರ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ನಿರ್ದೇಶಕ ಜೀವನ ಕುಮಾರ್ ಶೆಟ್ಟಿ, ಕ್ರೀಡಾ ಸಂಯೋಜಕ ರಾಮ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸ್ಪರ್ಧೆಯ ಫಲಿತಾಂಶ: ಕುಂದಾಪುರ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಶ್ರೀ ಶಾರದ ಕಾಲೇಜು ಬಸ್ರೂರು ಪ್ರಥಮ ಸ್ಥಾನ ಹಾಗೂ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಸರ್ಕಾರಿ ಪ.ಪೂ ಕಾಲೇಜು ಕೋಟೇಶ್ವರ ಪ್ರಥಮ ಸ್ಥಾನ ಮತ್ತು ಭಂಡಾರ್‌ಕರ್‍ಸ್ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು. ಪಂದ್ಯಾಟದಲ್ಲಿ ಒಟ್ಟು 25 ತಂಡಗಳು ಭಾಗವಹಿಸಿದ್ದು ಎಕ್ಸಲೆಂಟ್ ಸಂಸ್ಥೆಯ ಅನುಜ್ ಕುಮಾರ್ ಜೆ ಎಸ್ ಜಿಲ್ಲಾ ಮಟ್ಟದ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಉದ್ಘಾಟನಾ ಕಾರ್ಯಕ್ರಮವನ್ನು ಆಂಗ್ಲಭಾಷಾ ಉಪನ್ಯಾಸಕರಾದ ಪ್ರಕಾಶ್ ಆಚಾರ್ಯ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಶರತ್ ಕುಮಾರ್ ನಿರ್ವಹಿಸಿದರು. ವಿಶೇಷವಾಗಿ ಅಭಿ ಪಾಂಡೇಶ್ವರರವರ ವೀಕ್ಷಕ ವಿವರಣೆ ನೀಡಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಜಯಲತಾ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕುಮಾರ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!