spot_img
Sunday, April 12, 2026
spot_img

ವಂಡ್ಸೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ

ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ಕಾರ್ಯಕ್ರಮ ಬಿಜೆಪಿ ಸ್ಥಾನಿಯ ಸಮಿತಿ ವತಿಯಿಂದ ಕಟ್ಟೆಮನೆ ಶಿವರಾಮ ಶೆಟ್ಟಿಯವರ ಮನೆ ವಠಾರದಲ್ಲಿ ಜರುಗಿತು.

ಬೈಂದೂರು ಬಿ.ಜೆ.ಪಿ ಮಂಡಲದ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ವಾಟಿಸಿದರು. ಬೈಂದೂರು ಕ್ಷೇತ್ರ ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ವಂಡ್ಸೆ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ದೀಪಕ್ ಶೆಟ್ಟಿ ಕಟ್ಟೆಮನೆ ಇವರು ಅಧ್ಯಕ್ಷತೆ ವಹಿಸಿದ್ದರು.

ವಂಡ್ಸೆ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಶಶಿಕಲಾ ಪಕ್ಷದ ಹಿರಿಯ ಕಾರ್ಯಕರ್ತರಾದ ವಿ ಕೆ.ಶಿವರಾಮ ಶೆಟ್ಟಿ, ಕೆ. ಸುರೇಂದ್ರ ಶೆಟ್ಟಿ, ಸುಧೀರ ಶೆಟ್ಟಿ ಕೊರಾಡಿಮನೆ, ಕೊಳ್ತ ಗೋಪಾಲ ಶೆಟ್ಟಿ, ರವಿರಾಜ ಶೆಟ್ಟಿ ಚಿತ್ತೂರು, ನಿತ್ಯಾನಂದ ಶೆಟ್ಟಿ, ಮನೋಜ ಶೆಟ್ಟಿ, ಚಂದ್ರ ಗಾಣಿಗ, ಪ್ರಭಾಕರ ಗಾಣಿಗ, ರಾಘವೇಂದ್ರ ಶೆಟ್ಟಿ ಅಬ್ಬಿ, ಸುಧಾಕರ ಪೂಜಾರಿ, ರಿತೇಶ ಶೆಟ್ಟಿ ಕಟ್ಟೆಮನೆ ಮೊದಲಾದವರು ಉಪಸ್ಥಿತರಿದ್ದರು.

ಬೈಂದೂರು ಬಿಜೆಪಿ ಮಂಡಲ ಕಾರ್ಯದರ್ಶಿ ಪ್ರಕಾಶ ಪೂಜಾರಿ ಜೆಡ್ಡು ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!