spot_img
Sunday, April 12, 2026
spot_img

ಕುಂದಾಪುರ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ

ಕುಂದಾಪುರ: ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬವನ್ನು ಅವರದೇ ಆಶಯದಂತೆ ರಕ್ತದಾನ, ಆರೋಗ್ಯ ಶಿಬಿರ, ಬಡವರಿಗೆ ನೆರವಾಗುವಂತಹ ಸೇವಾ ಕಾರ್‍ಯಕ್ರಮವನ್ನಾಗಿ ಆಚರಿಸಲಾಗುತ್ತಿರುವುದು ಅರ್ಥಪೂರ್ಣ ಬೆಳವಣಿಗೆ. ರಕ್ತದಾನ ಶ್ರೇಷ್ಠವಾಗಿದ್ದು,ರಕ್ತಕ್ಕೆ ಪರ್ಯಾಯ ರಕ್ತವೇ ಹೊರತು ಬೇರೆ ಯಾವುದು ಕೊಡಲು ಸಾಧ್ಯವಿಲ್ಲ. ರಕ್ತದಾನದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿ ಮೂಡುತ್ತಿದ್ದು, ಅದು ಇನ್ನಷ್ಟು ವೃದ್ದಿಸಬೇಕಾಗಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.

ಅವರು ಸೆ.17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಕುಂದಾಪುರ ಮಂಡಲ, ಯುವ ಮೋರ್ಚಾ ಕುಂದಾಪುರದ ವತಿಯಿಂದ ಸೇವಾ ಪಾಕ್ಷಿಕದ ಅಂಗವಾಗಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಸಹಯೋಗದಲ್ಲಿ ರಕ್ತನಿಧಿ ಕೇಂದ್ರದಲ್ಲಿ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ಮಾತನಾಡಿದರು.

ಕುಂದಾಪುರ ರೆಡ್‌ಕ್ರಾಸ್ ಘಟಕದ ಅಧ್ಯಕ್ಷ ಎಸ್. ಜಯಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ ಕಾರ್ಯಕ್ರಮದ ಆಶಯ ವಿವರಿಸಿದರು.

ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಪುರಸಭಾಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ ಎಸ್. ಪೂಜಾರಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಪ್ರಜ್ವಲ್, ಜಿಲ್ಲಾ ಪ್ರ.ಕಾರ್‍ಯದರ್ಶಿ ಸದಾನಂದ ಉಪ್ಪಿನಕುದ್ರು, ರೆಡ್‌ಕ್ರಾಸ್ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!