spot_img
Sunday, April 12, 2026
spot_img

ಮಾಣಿ ಜಲಾಶಯ ನೀರಿನ ಮಟ್ಟ ಹೆಚ್ಚಳ: ನದಿ ಪಾತ್ರದ ಜನರಿಗೆ‌ ಎಚ್ಚರಿಕೆ


ಉಡುಪಿ: ವಾರಾಹಿ ಯೋಜನೆಯ ಮಾಣಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನೆಲೆ, ಜಲಾಶಯದ ನೀರಿನ ಮಟ್ಟ‌ ಏರಿಕೆಯಾಗುತ್ತಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 594.36 ಮೀ. ಇದ್ದು, ಈಗಾಗಲೇ ಜಲಾಶಯದ ಮಟ್ಟವು 590.10 ಮೀ.ತಲುಪಿದ್ದು, ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರೆದಲ್ಲಿ‌ ಅಣೆಕಟ್ಟು ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು.

ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವಾರಾಹಿ/ ಹಾಲಾಡಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಕಾರ್ಯನಿರ್ವಾಹಕ‌ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!