spot_img
Sunday, April 12, 2026
spot_img

ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ ಉದ್ಘಾಟನೆ

ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಉಡುಪಿ ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ಬಾಲಕ/ ಬಾಲಕಿಯರ ಕಬ್ಬಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ ನೆರವೇರಿತು.

ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ ಗೋಪಾಲ ಪೂಜಾರಿಯವರು ವಹಿಸಿ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ ಸೂಕ್ತ ಕ್ರೀಡಾ ಪ್ರತಿಭೆಗಳನ್ನು ಆಯ್ಕೆ ಮಾಡುವ ಕಾರ್ಯ ಮಾಡಬೇಕಾಗಿದೆ ಎಂದು ಶುಭ ಹಾರೈಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿಯವರು ಕಾರ್ಯಕ್ರಮ ಉದ್ಘಾಟಿಸಿದರು.

ಸಮಾರಂಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ, ಉಡುಪಿ ಜಿಲ್ಲಾ ಪದವಿಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ, ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕುಂದಾಪುರ ತಾಲೂಕು ಕ್ರೀಡಾ ಸಂಯೋಜಕರಾದ ರಾಮ ಶೆಟ್ಟಿ, ಎಸ್.ವಿ. ಪದವಿಪೂರ್ವ ಕಾಲೇಜು ಗಂಗೊಳ್ಳಿಯ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್, ಕೋಟ ವಿವೇಕ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ವಸಂತ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ದಿನೇಶ್ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಡಾ| ಮಂಜುನಾಥ ಗಾಣಿಗ, ಕಾರ್ಯದರ್ಶಿಗಳಾದ ಸುನಿಲ್ ಚಿತ್ತಾಲ್, ಕೋಶಾಧಿಕಾರಿ ಕಾರ್ತಿಕೇಯ ಎಮ್.ಎಸ್, ಆಡಳಿತಾಧಿಕಾರಿಗಳು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಗಣೇಶ ಮೊಗವೀರ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಉದಯ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ಆಂಗ್ಲಭಾಷಾ ಉಪನ್ಯಾಸಕಿ ಪ್ರಿಯಾಂಕ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!