spot_img
Sunday, April 12, 2026
spot_img

ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

ಕುಂದಾಪುರ: ಸ್ಪರ್ಧೆಯಲ್ಲಿ ಸೋಲು-ಗೆಲುವು ಸಾಮಾನ್ಯ. ವಿದ್ಯಾರ್ಥಿಗಳಾದ ನೀವು ಸೋಲು ಗೆಲುವುವನ್ನು ಸಮಾನವಾಗಿ ಸ್ವೀಕರಿ ಸಿದಾಗ ಬದುಕಿನಲ್ಲಿ ಯಶಸ್ಸು ತಮ್ಮದಾಗಿಸಬಹುದು ಎಂದು ಸರಸ್ವತಿ ವಿದ್ಯಾಲಯ ಗಂಗೊಳ್ಳಿ ಇಲ್ಲಿನ ದೈಹಿಕ ಶಿಕ್ಷಣ ಉಪನ್ಯಾಸಕ ನಾಗರಾಜ್ ಶೆಟ್ಟಿ ಹೇಳಿದರು.

ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಸೆ.22ರಂದು ಜರುಗಿದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾ ಸಂಯೋಜಕರಾದ ರಾಮ ಶೆಟ್ಟಿ, ಶ್ರೀ ವೆಂಕಟರಮಣ ಸಂಸ್ಥೆಯ ಪ್ರಾಂಶುಪಾಲರಾದ ರಾಗಿಣಿ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ, ಶ್ರೀ ವೆಂಕಟರಮಣ ಸಂಸ್ಥೆಯ ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜಾ, ಶ್ರೀ ವೆಂಕಟರಮಣ ಸಂಸ್ಥೆಯ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀ ವೆಂಕಟರಮಣ ಸಂಸ್ಥೆ ಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್ ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಸವಿತಾ ರಮೇಶ್ ವಂದಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!