spot_img
Sunday, April 12, 2026
spot_img

ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.11 ಡಿವಿಡೆಂಡ್ ಘೋಷಣೆ

ಬೈಂದೂರು: ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಜಡ್ಕಲ್‌ನ ಸೈಂಟ್ ಜಾರ್ಜ್ ಚರ್ಚ್‌ನ ಸಭಾಂಗಣದಲ್ಲಿ ನಡೆಯಿತು.

ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಶೇಕಡಾ 11% ಡಿವಿಡೆಂಡ್ ಘೋಷಣೆ ಮಾಡಿದರು. ಸದ್ಯದಲ್ಲೇ ಸಂಘವು ಸ್ವಂತ ಕಟ್ಟಡಕ್ಕೆ ಸ್ಥಳಾಂತರವಾಗಲಿದೆ. ಸಂಘವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂಬ ಹೆಗ್ಗಳಿಕೆ ನಮ್ಮ ಸಂಘದ್ದಾಗಿದೆ. ಮುಂದೆ ಇನ್ನಷ್ಟು ಸೇವೆಯನ್ನು ಸಂಘದ ವತಿಯಿಂದ ಸದಸ್ಯರಿಗೆ ನೀಡಲು ಬದ್ಧರಾಗಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಶೈಕ್ಷಣಿಕವಾಗಿ ಉತ್ತಮ ಅಂಕಗಳಿಸಿದ ಎಸ್ ಎಲ್ ಸಿ,ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪೋತ್ಸಾಹ ಧನ ನೀಡಿ ಗೌರವಿಸಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷ ದೇವದಾಸ್, ನಿರ್ದೇಶಕರುಗಳಾದ ನಾರಾಯಣ ಶೆಟ್ಟಿ, ಜೋಸೆಫ್ ಕೆ.ಎಂ, ವಿನೋದ್ ಜೋರ್ಜ್, ಜೋಷಿ ಪಿ.ಪಿ, ಮನೋಜ್ ಜೆ.ಪಿ, ಗುರುರಾಜ್ ಪೂಜಾರಿ, ಶ್ರೀ ಮಹಾಬಲ ಪೂಜಾರಿ, ಎನ್. ಸುರೇಂದ್ರ ನಾಯ್ಕ, ಮುತ್ತ, ಶ್ರೀಮತಿ ರೋಸಮ್ಮ, ಶ್ರೀಮತಿ ಸವಿತಾ ಶೆಟ್ಟಿ, ಹಾಗೂ ಸಿಬ್ಬಂದಿ ವರ್ಗದವರು ಉಪಸಿತರಿದ್ದರು.

ಸಂಘದ ಉಪಾಧ್ಯಕ್ಷ ದೇವದಾಸ್ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ವೆಂಕಟರಮಣ ಶರ್ಮ ಹಿಂದಿನ ಸಭೆಯ ನಡವಳಿಯನ್ನು ಓದಿದರು. ಸಂಘದ ಗುಮಾಸ್ತ ಪ್ರಸಾದ ಕಾರ್ಯಕ್ರಮ ನಿರೂಪಿಸಿದರು. ಸಂಘದ ನಿರ್ದೇಶಕ ವಿನೋದ್ ಜೋರ್ಜ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!