Sunday, September 8, 2024

ನಟ, ನಿರ್ದೇಶಕ ಡಾ.ರಮೇಶ್ ಅರವಿಂದ್ ಅವರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

ಕೋಟ, ಸೆ.24: ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟದ ಸಹಭಾಗಿತ್ವದಲ್ಲಿ ಕಳೆದ ಹದಿನೇಳು ವರ್ಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದ್ದು 2022ರ ಸಾಲಿನ ಪ್ರಶಸ್ತಿಗೆ ನಟ ನಿರ್ದೇಶಕ ಡಾ.ರಮೇಶ್ ಅರವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ.

ಹಲವು ದಶಕಗಳಿಂದ ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದು ಕೀರ್ತಿ ಗಳಿಸಿದ ಡಾ.ರಮೇಶ್ ಅರವಿಂದ್ ಅವರ ಸರಳ, ಸವ್ಯಸಾಚಿ ವ್ಯಕ್ತಿತ್ವ, ಸಾಧನೆ ಪರಿಗಣಿಸಿ ಈ ವರ್ಷ ಅವರನ್ನು ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈಗಾಗಲೇ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. ಬಿ. ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಶ್ರೀಮತಿ ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ , ಗಿರೀಶ್ ಭಾರದ್ವಜ್ ಅವರಿಗೆ ಪ್ರದಾನ ಮಾಡಲಾಗಿರುತ್ತದೆ.

ಅಕ್ಟೋಬರ್ 10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನ ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಆಯ್ಕೆ ಸಮಿತಿ ಸದಸ್ಯ ಯು.ಎಸ್ ಶೆಣೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ, ಪಿ.ಡಿ.ಓ ಜಯರಾಮ್ ಶೆಟ್ಟಿ, ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!