spot_img
Monday, April 13, 2026
spot_img

ಬ್ರಹ್ಮಾವರ: ಜಿ ಎಮ್‌ನಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ

ಬ್ರಹ್ಮಾವರ: ಅಕ್ಟೋಬರ್ 2 ರಾಷ್ಟ್ರಪಿತ ಗಾಂಧೀಜಿಯವರ 153 ನೇ ಹುಟ್ಟುಹಬ್ಬದ ದಿನವನ್ನು ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲಿನಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಗಾಂಧಿ ಭಾವಚಿತ್ರಕ್ಕೆ ಎಲ್ಲರೂ ಪುಷ್ಪನಮನವನ್ನು ಸಲ್ಲಿಸಿ ದೀಪ ಬೆಳಗಿ ಗಾಂಧೀ ತತ್ವಗಳನ್ನು ತಮ್ಮ ಜೀವನದಲ್ಲಿ ಪಾಲಿಸುವುದಾಗಿ ಪ್ರತಿಜ್ಞೆಯನ್ನು ಮಾಡಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಗಾಂಧಿ ಬಾಪು ಎಂದೇ ಪ್ರಸಿದ್ಧರಾಗಿದ್ದಾರೆ. ಅವರ ಅಹಿಂಸೆ, ಮಾನವೀಯತೆ ಮುಂತಾದ ಮೌಲ್ಯಗಳು ನಮಗೆಲ್ಲರಿಗೂ ಆದರ್ಶವಾಗಿದೆ. ಪ್ರತಿಯೊಬ್ಬರೂ ಸ್ವಚ್ಛತೆಗೆ ಪ್ರಾಮುಖ್ಯತೆ ಕೊಡಬೇಕು. ಸ್ವಚ್ಛ ಮನಸ್ಸು, ಸ್ವಚ್ಛ ಪರಿಸರದಿಂದ ಎಲ್ಲವನ್ನು ಸಾಧಿಸಲು ಸಾಧ್ಯವೆಂದರು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಟ್ರಸ್ಟಿಯಾದ ತಾರಾ ಪ್ರಕಾಶ್ಚಂದ್ರ ಶೆಟ್ಟಿ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!