spot_img
Monday, April 13, 2026
spot_img

ಕೊಲ್ಲೂರು ಶ್ರೀ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧೀಜಿ, ಶಾಸ್ತ್ರೀ ಜನ್ಮದಿನಾಚರಣೆ

ಕೊಲ್ಲೂರು ಶ್ರೀ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರು ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಕೋಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ ಕೆರಾಡಿ ಇವರು ವಹಿಸಿದ್ದು ಗಾಂಧೀಜಿಯವರ ತತ್ವ ಆದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗಾಂಧೀಜಿ ವಿಚಾರದಾರೆಯಿಂದ ಪ್ರೇರಿತರಾಗಿ ಸಕಾರತ್ಮಕತೆಯಿಂದ ಉತ್ತಮ ಬದುಕನ್ನು ಕಟ್ಟಿಕೊಂಡು ನವನಿರ್ಮಾಣ ಭಾರತಕ್ಕೆ ಕಟಿಬದ್ದರಾಗಬೇಕೆಂದೂ ಹಾಗೇಯೆ ಲಾಲ್ ಬಾಹದ್ದೂರ್ ಶಾಸ್ತ್ರೀಯವರ ಆದರ್ಶಗಳನ್ನು ಮೈಗೋಡಿಸಿಕೊಂಡು ಸದೃಡ ದೇಶವನ್ನು ನಿರ್ಮಾಣ ಮಾಡಲು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಸ್ ಅರುಣ್ ಪ್ರಕಾಶ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತವಿಸಿದರು. ಶ್ರೀ ದೇವಳದ ಆಡಳಿತ ಮಂಡಳಿಯ ಸದಸ್ಯರಾದ ಗೋಪಲಕೃಷ್ಣ ನಾಡ ಹಾಗೂ ರತ್ನ ರಮೇಶ್ ಉಪಸ್ಥಿತರಿದ್ದು ಶುಭ ಕೋರಿದರು. ಉಪನ್ಯಾಸಕ ನಾಗರಾಜ ಅಡಿಗ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!