spot_img
Monday, April 13, 2026
spot_img

ಶ್ರೀ ನಾರಾಯಣಗುರು ಯುವಕ ಮಂಡಲ ಕುಂದಾಪುರ ದಸರಾ ಧಾರ್ಮಿಕ ಕಾರ್ಯಕ್ರಮ

ಕುಂದಾಪುರದ ಪ್ರತಿಷ್ಠಿತ ಯುವಕ ಮಂಡಲಗಳಲ್ಲಿ ಒಂದಾದ ಶ್ರೀ ನಾರಾಯಣಗುರು ಯುವಕ ಮಂಡಲದ 45ನೇ ವರ್ಷದ ಕುಂದಾಪುರ ದಸರಾ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ಶ್ರೀ ನಾರಾಯಣಗುರು ಕಲ್ಯಾಣ ಮಂಟಪದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ನಾರಾಯಣಗುರು ಯುವಕ ಮಂಡಲದ ಅಧ್ಯಕ್ಷರಾದ ಅಜಿತ್ ಪೂಜಾರಿಯವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬಿಲ್ಲವ ಸಂಘದ ಅಧ್ಯಕ್ಷರಾದ ಅಶೋಕ ಪೂಜಾರಿ ಬೀಜಾಡಿ, ಶ್ರೀ ನಾರಾಯಣಗುರು ಶೈಕ್ಷಣಿಕ ಮತ್ತು ಸಾಂಸ್ಕ್ರತಿಕ ದತ್ತಿ ಸಂಸ್ಥೆಯ ಕಾರ್ಯದರ್ಶಿಗಳಾದ ಭಾಸ್ಕರ ವಿಠಲವಾಡಿ, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಮನಾ ಬಿದ್ಕಲ್‌ಕಟ್ಟೆ, ಉದ್ಯಮಿಗಳಾದ ಸಂತೋಷ್ ಪೂಜಾರಿ ಜಡ್ಡು ಉಪಸ್ಥಿತರಿದ್ದರು. ಅಂತರಾಷ್ಟ್ರೀಯ ಕರಾಟೆ ಕ್ರೀಡಾಪಟುಗಳಾದ ಪವನ್ ಎನ್. ಪೂಜಾರಿ, ವರುಣ್ ಪೂಜಾರಿ, ಇಂಡಿಯಾ ಬುಕ್ ಆಫ್ ರೆಕಾರ್ಡ್ ವಿಜೇತೆ ಗ್ಯಾನದಾ ಆರ್ ಪೂಜಾರಿ, ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಜ್ಯೋತಿಕಾ ಪೂಜಾರಿ ಇವರುಗಳನ್ನು ಅಭಿನಂದಿಸಲಾಯಿತು. ಶ್ರೀ ನಾರಾಯಣಗುರು ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಚಂದ್ರಹಾಸ ಚರಿತೆ ಕಥಾನಕವನ್ನು ಪ್ರಸ್ತುತ ಪಡಿಸಲಾಯಿತು.

ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಬಸವ ಪೂಜಾರಿ ಸ್ವಾಗತಿಸಿದರು. ಯುವಕ ಮಂಡಲದ ಉಪಾಧ್ಯಕ್ಷರಾದ ಸಂದೇಶ್ ಪೂಜಾರಿ ಬೀಜಾಡಿ ವಂದಿಸಿದರು. ರಾಜೇಶ್ ಕಡ್ಗಿಮನೆ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!