spot_img
Monday, April 13, 2026
spot_img

ಡಾ. ಶಿವರಾಮ ಕಾರಂತ ಜನ್ಮೋತ್ಸವ ಪೂರ್ವ ಸಿದ್ಧತೆ-ಸಚಿವ ಶ್ರೀನಿವಾಸ ಪೂಜಾರಿಯರಿಂದ ವೀಕ್ಷಣೆ

ಕೋಟ : ಜ್ಞಾನಪೀಠ ಪ್ರಶಸ್ತಿ ವಿಜೇತ ಕೋಟ ಶಿವರಾಮ ಕಾರಂತ ಜನ್ಮೋತ್ಸವ ಕಾರ್ಯಕ್ರಮದ ಸಭಾ ವೇದಿಕೆಯ ರಚನೆಯು ಸೇರಿದಂತೆ ಪೂರ್ವ ಸಿದ್ಧತೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ವೀಕ್ಷಿಸಿದರು.

ಕೋಟದ ರಾಷ್ಟ್ರೀಯ ಹೆದ್ದಾರಿ ಶ್ರೀ ಶಾಂಭವಿ ಶಾಲೆಯ ಮೈದಾನದಲ್ಲಿ ಕಾರಂತರ ಜನ್ಮದಿನವಾದ ಅಕ್ಟೋಬರ್ 10ರಂದು ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕಾರಂತರ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ ಬಾರಿ ಪ್ರಶಸ್ತಿಗೆ ಕಲಾವಿದ ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ. ಸುಮಾರು 2000 ಮಂದಿ ಕುಳಿತು ವೀಕ್ಷಿಸಬಹುದಾದ ವಿಶಾಲ ಸುಸಜ್ಜಿತ ಸಭಾ ವೇದಿಕೆ ಸಿದ್ಧತೆ ಮಾಡಲಾಗುತ್ತಿದ್ದು, ಕಾರ್ಯಕ್ರಮದ ನಂತರ ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವಿದ್ದು, ಅಪಾರ ಜನ ಸೇರುವ ನಿರೀಕ್ಷೆ ಇದೆ.

ಅಕ್ಟೋಬರ್ 10ರ ಮಧ್ಯಾಹ್ನ 3.30ಕ್ಕೆ ಕೋಟತಟ್ಟು ಗ್ರಾಮ ಪಂಚಾಯತ್ ನಿಂದ ಪ್ರಶಸ್ತಿ ಪುರಸ್ಕತರೊಂದಿಗೆ ಸಾಂಸ್ಕೃತಿಕ ಮೆರವಣಿಗೆ ಹೊರಡಲಿದ್ದು, ಕಾರಂತ ಪ್ರಶಸ್ತಿಯನ್ನು ಸಕಲ ಗೌರವಗಳೊಂದಿಗೆ ಹೊತ್ತು ಸಾಗುವ ಸಂಪ್ರದಾಯವಿದೆ. ಕಾರಂತೋತ್ಸವದ ಪೂರ್ವ ಸಿದ್ಧತೆಗಳನ್ನು ವೀಕ್ಷಿಸಲು ಬಂದ ಸಚಿವ ಕೋಟರೊಂದಿಗೆ ಕಾರಂತ ಪ್ರತಿಷ್ಠಾನದ ಗೌರವಾಧ್ಯಕ್ಷ ಆನಂದ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್, ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಮುಂತಾದವರು ಉಪಸ್ಥಿತರಿದ್ದರು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!