spot_img
Wednesday, January 22, 2025
spot_img

‘ನಮ್ಮ ನಾಡ ಒಕ್ಕೂಟ’ದ ವತಿಯಿಂದ ಸಾಧಕರಿಗೆ ಸನ್ಮಾನ

ಕುಂದಾಪುರ: ನಮ್ಮ ನಾಡ ಒಕ್ಕೂಟ ಕುಂದಾಪುರ ತಾಲೂಕು ಘಟಕದ ವತಿಯಿಂದ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್ ತೆಕ್ಕಟ್ಟೆಯಲ್ಲಿ ಸಮಾಜದ ನಾಲ್ಕು ಸಾಧಕರನ್ನು ಗೌರವಿಸಲಾಯಿತು. ಜಿಲ್ಲಾ, ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ 100ಕ್ಕೂ ಹೆಚ್ಚು ಪದಕಗಳನ್ನು ಗಳಿಸಿದ ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್ ಸತೀಶ್ ಖಾರ್ವಿ ಕುಂದಾಪುರ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಈ ವರ್ಷದ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಆಝಾದ್ ಮುಹಮ್ಮದ್ ಕಾರ್ಕಳ, ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್ ಸಿಹಾನ್ ಶೇಖ್ ಬಸ್ರೂರು, ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಅಬ್ದುಲ್ ಮುತ್ತಲಿಬ್ ವಂಡ್ಸೆ ಅವರನ್ನು ಸನ್ಮಾನಿಸಲಾಯಿತು.

ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾದ ಎಸ್. ದಸ್ತಗೀರ್ ಸಾಹೇಬ್ ಕಂಡ್ಲೂರು ರವರು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹುಸೇನ್ ಕಾರ್ಕಳ, ಕೇಂದ್ರ ಸಮಿತಿಯ ಕೋಶಾಧಿಕಾರಿ ಅಬ್ದುಲ್ ಹಮೀದ್ ಮೂಡಬಿದ್ರೆ, ಉಡುಪಿ ಜಿಲ್ಲಾಧ್ಯಕ್ಷರಾದ ಮುಶ್ತಾಕ್ ಅಹ್ಮದ್ ಬೆಳ್ವೆ, ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಫೀಕ್ ಮಾಸ್ಟರ್, ಖ್ಯಾತ ನ್ಯಾಯವಾದಿ ಸುಹಾನ್ ಸಾಸ್ತಾನ, ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು, ಜಿಲ್ಲಾ ಸಮಿತಿ ಸದಸ್ಯರು ಹಾಗೂ ಕುಂದಾಪುರ ತಾಲೂಕು ಘಟಕದ ಸದಸ್ಯರು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೌಲಾನಾ ಝಮೀರ್ ಅಹ್ಮದ್ ರಶಾದಿಯವರ ಕುರ್ ಆನ್ ಪಠಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ತಾಲೂಕು ಕಾರ್ಯದರ್ಶಿ ನಾಸಿರ್ ಮೂಡುಗೋಪಾಡಿ ಸ್ವಾಗತಿಸಿದರು, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿಯವರು ಒಕ್ಕೂಟದ ಧ್ಯೇಯೊದ್ದೇಶವನ್ನು ವಿವರಿಸಿದರು. ಮುನೀರ್ ಅಹ್ಮದ್ ಕಂಡ್ಲೂರು, ಝಹೀರ್ ನಾಖುದಾ ಗಂಗೊಳ್ಳಿ, ರಿಯಾಝ್ ಕೋಡಿ, ಫಝಲ್ ನೇರಳಕಟ್ಟೆ ಪ್ರಶಸ್ತಿ ಪತ್ರ ಓದಿದರು. ಜಿಲ್ಲಾ ಉಪಾಧ್ಯಕ್ಷರಾದ ಮುಜಾವರ್ ಅಬು ಮುಹಮ್ಮದ್ ಕುಂದಾಪುರ ವಂದಿಸಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!