spot_img
Monday, April 13, 2026
spot_img

ಕ್ರೋಡಬೈಲೂರು: ಗೆಳೆಯರ ಬಳಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಶಂಕರನಾರಾಯಣ: ಗೆಳೆಯರ ಬಳಗ ಕ್ರೋಡಬೈಲೂರು ಇವರ ನೇತೃತ್ವದಲ್ಲಿ ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ ಇವರ ಸಹಯೋಗದೊಂದಿಗೆ ದಿ. ಮಂಜುನಾಥ್ ಶೆಟ್ಟಿ ಮಶ್ಯಾಡಿ ಇವರ ಸ್ಮರಣಾರ್ಥ ಅ.9 ರಂದು ಕ್ರೋಡಬೈಲೂರು ಸ.ಹಿ.ಪ್ರಾ ಶಾಲಾ ವಠಾರದಲ್ಲಿ ಬೃಹತ್ ರಕ್ತದಾನ ಶಿಬಿರ ಜರಗಿತು.

ಬೆಂಗಳೂರು ಮೋಟಾರ್ಸ್ ಇದರ ಮಾಲೀಕರಾದ ಪ್ರವೀಣ್ ಕುಮಾರ್ ಶೆಟ್ಟಿ ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಂಕರನಾರಾಯಣ ಗ್ರಾಮ ಪಂಚಾಯತ್ ಸದಸ್ಯರಾದ ಶಂಕರನಾರಾಯಣ ಭಟ್ ಕೊಂಡಳ್ಳಿ, ಉಮೇಶ್ ಶೆಟ್ಟಿ ಕಲ್ಗದ್ದೆ, ವತ್ಸಲ ಶೆಟ್ಟಿ ಬೈಲೂರು, ಹೋಟೆಲ್ ಉದ್ಯಮಿ ಮಂಜುನಾಥ್ ಶೆಟ್ಟಿ ಮೂಡುಬೈಲೂರು, ಜಿ.ಪಂ.ಮಾಜಿ ಸದಸ್ಯೆ ಮಮತಾ ಆರ್ ಶೆಟ್ಟಿ ಹದ್ದೂರು, ಸಚ್ಚಿದಾನಂದ ವೈದ್ಯ ಶಂಕರನಾರಾಯಣ, ಸುಬ್ರಹ್ಮಣ್ಯ ಐತಾಳ್ ಬೈಲೂರು, ಆನಂದ ಮೊಗವೀರ ಬೈಲೂರು, ಶೇಖರ ಮೊಗವೀರ ಬೈಲೂರು ಹಾಗೂ ಸುಧಾಕರ ಮೊಗವೀರ ಬೈಲೂರು ಮುಂತಾದವರು ಉಪಸ್ಥಿತರಿದ್ದರು.

ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ದೀಕ್ಷಿತ್ ಪೂಜಾರಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!