spot_img
Monday, April 13, 2026
spot_img

ಮನುವಿಕಾಸ ಸಂಸ್ಥೆ ಮೂಲಕ ಮೀನುಗಾರಿಕಾ ಕುಟುಂಬಗಳ ಆರ್ಥಿಕ ಸುಧಾರಣೆಗೆ ಯೋಜನೆ

ಕುಂದಾಪುರ: ಮನುವಿಕಾಸ ಸಂಸ್ಥೆ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯಾಗಿದ್ದು ಎಚ್.ಡಿ.ಎಫ್.ಸಿ ಬ್ಯಾಂಕ್ ಪರಿವರ್ತನ ಸಹಕಾರದೊಂದಿಗೆ ಕುಂದಾಪುರ ತಾಲೂಕಿನ ಮೀನುಗಾರಿಕಾ ಕುಟುಂಬಗಳ ಆರ್ಥಿಕ ಸುಧಾರಣೆ ಮತ್ತು ರೈತ ಉತ್ಪಾದಕ ಸಂಸ್ಥೆಯ ಮೂಲಕ ಮುಂದಿನ ಮೂರು ವರ್ಷಗಳಲ್ಲಿ ಮೌಲ್ಯವರ್ಧಿತ ಉತ್ಪನ್ನಗಳೊಂದಿಗೆ ಗ್ರಾಹಕರನ್ನು ತಲುಪುವ ಯೋಜನೆ ಹೊಂದಿದೆ. ಮೀನುಗಾರರ ಸ್ವಸಹಾಯ ಸಂಘಗಳ ರಚಿಸಿ ಅವರಿಗೆ ಸಹಾಯಧನವನ್ನು ಒದಗಿಸಿ ಸ್ವಾವಲಂಬನೆಗೆ ಒತ್ತು ನೀಡಲಾಗುತ್ತದೆ ಎಂದು ಮನುವಿಕಾಸ ಸಂಸ್ಥೆಯ ನಿರ್ದೇಶಕ ಗಣಪತಿ ಭಟ್ ಹೇಳಿದರು.

ಅವರು ಅ.20ರಂದು ಕುಂದಾಪುರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಮಹಿಳಾ ಸ್ವಸಹಾಯ ಸಂಘಗಳ ರಚನೆ, ಕಾರ್ಯಾಗಾರ, ಬಲವರ್ಧನೆಗೆ ಆದ್ಯತೆ, ಪಂಜರ ಮೀನು ಕೃಷಿಗೆ ಉತ್ತೇಜನ, ತರಬೇತಿ, ಮೌಲ್ಯವರ್ಧನೆ ಹಾಗೂ ಮಾರಾಟಕ್ಕೆ ಉತ್ತೇಜನ, ಮಹಿಳೆಯರಿಗೆ ಸ್ವ-ಉದ್ಯೋಗಕ್ಕೆ ಉತ್ತೇಜನ ಹಾಗೂ ಪ್ರಾರಂಭಿಕ ಆರ್ಥಿಕ ನೆರವು, ರಸ್ತೆ ಬದಿ ಮೀನು ಆಹಾರ ಖಾದ್ಯ ಉತ್ಪನ್ನಗಳ ಮಾರಾಟಕ್ಕೆ ಸಹಕಾರ, ಮೀನುಗಾರಿಕಾ ಕುಟುಂಬಗಳ ಆಸಕ್ತ ಯುವಕ-ಯುವತಿಯರಿಗೆ 2 ತಿಂಗಳ ಉಚಿತ ಹೋಟೆಲ್ ಮ್ಯಾನೇಜ್‌ಮೆಂಟ್ ತರಬೇತಿ ನೀಡಲಾಗುತ್ತದೆ ಎಂದರು.

ರೈತ ಉತ್ಪಾದಕ ಸಂಸ್ಥೆಯ ಮೂಲಕ ಸಮುದಾಯದ ಜನರ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಮಾರಾಟ, ಒಣಮೀನು ಘಟಕ ಸ್ಥಾಪನೆ ಪ್ರೋತ್ಸಾಹ, ಗ್ರಾಮೀಣಾಭಿವೃದ್ದಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಗುತ್ತದೆ. ಕುಂದಾಪುರ ತಾಲೂಕಿನ ಗ್ರಾಮೀಣ ಭಾಗದ ಮೀನುಗಾರಿಕಾ ಅವಲಂಬಿತ ಕುಟುಂಬಗಳಿಗೆ ಮಾತ್ರ ಯೋಜನೆ ರೂಪಿಸಿದ್ದು, ಫಲಾನುಭವಿಗಳ ಆಯ್ಕೆ ನುರಿತ ತಜ್ಞರ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದರು.

ಈಗಾಗಲೇ ಬೈಂದೂರು, ಕುಂದಾಪುರ ತಾಲೂಕಿನ ಕರಾವಳಿ ಭಾಗದಲ್ಲಿ ಗ್ರಾಮಗಳಲ್ಲಿ ಯೋಜನೆ ಆರಂಭವಾಗಿದೆ ಎಂದು ಹೇಳಿದ ಅವರು, ಮನುವಿಕಾಸ ಸಂಸ್ಥೆ ೨೦೦೩ನೇ ಇಸವಿಯಲ್ಲಿ ನೊಂದಣಿಗೊಂಡು ಶಿಕ್ಷಣ, ಪರಿಸರ, ಗ್ರಾಮೀಣ ಅಭಿವೃದ್ದಿ ಕ್ಷೇತ್ರದಲ್ಲಿ ಹಾವೇರಿ, ಶಿವಮೊಗ್ಗ, ಧಾರವಾಡ, ಉಡುಪಿ, ಉತ್ತರಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆಯು ಈಗಾಗಲೇ 1500 ಕ್ಕೂ ಹೆಚ್ಚು ಸಣ್ಣ ಕೆರೆಗಳು, 175ಕ್ಕೂ ಹೆಚ್ಚು ದೊಡ್ಡ ಕೆರೆಗಳನ್ನು ನಿರ್ಮಿಸಿ 15000ಕ್ಕೂ ಹೆಚ್ಚು ರೈತರಿಗೆ ಸಹಾಯ ಮಾಡಿದೆ. ಮೂವತ್ತು ಸಾವಿರಕ್ಕೂ ಹೆಚ್ಚು ಮಹಿಳೆಯರನ್ನು ಸ್ವಸಹಾಯ ಸಂಘಗಳು ಜಂಟಿ ಬಾಧ್ಯತಾ ಸಂಘಗಳ ಮೂಲಕ ಸಂಘಟಿಸಿ ಸಾಲ ಸೌಲಭ್ಯ ಒದಗಿಸಿ ಸ್ವ ಉದ್ಯೋಗಕ್ಕೆ ಪ್ರೇರಣೆ ನೀಡಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಜಗದೀಶ ನಾಯ್ಕ, ಮೋಹನ ಸಿದ್ಧಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!