Sunday, September 8, 2024

ಗುಲ್ವಾಡಿ ಶ್ರೀ ವೀರಾಂಜನೇಯ ದೇವಸ್ಥಾನದ ಸಮೀಪ ವಾಮನ ಮುದ್ರೆ ಕಲ್ಲು ಪತ್ತೆ

kundapura: ಕುಂದಾಪುರ ತಾಲೂಕು ಗುಲ್ವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ವೀರಾಂಜನೇಯ ದೇವಸ್ಥಾನದ ಅಣತಿ ದೂರದಲ್ಲಿ ವಾಮನ ಮುದ್ರಿಕೆಯ ಕಲ್ಲು ಪತ್ತೆಯಾಗಿದೆ.

ಶೈವರು, ವೈಷ್ಣವರು, ಜೈನರು ಆರಾಧನೆಗೆ ಸಂಬಂಧಿಸಿದ ಹಾಗೂ ಅವರ ಆರಾಧನೆಗೆ ಗಡಿಗಳನ್ನು ಗುರುತಿಸುವುದು ಸಹಜ. ಶೈವರ ಗಡಿಗಳಿಗೆ ಲಿಂಗ ಮುದ್ರಿಕೆ ಕಲ್ಲು ಅಥವಾ ಶೈವ ಮುದ್ರಿಕೆ ಕಲ್ಲು, ವೈಷ್ಣವರ ಗಡಿಗಳಿಗೆ ವಾಮನ ಮುದ್ರಿಕೆ ಕಲ್ಲು, ಜೈನರ ಗಡಿಗಳಿಗೆ ಮುಕ್ಕೋಡೆ ಕಲ್ಲುಗಳನ್ನು ಹಾಕುತ್ತಿದ್ದರು. ಈ ಮೂಲಕ ಬಹಳ ಸ್ಪಷ್ಟವಾಗಿ ಅವರವರ ಗಡಿಗಳನ್ನು ಗುರುತಿಸಲು ಸಾಧ್ಯವಾಗುತ್ತಿತ್ತು.

ವಾಮನ ಮುದ್ರಿಕೆಯ ಕಲ್ಲುಗಳಲ್ಲಿ ಸೂರ್ಯ, ಚಂದ್ರ ಇರುವ ತನಕ ಅಜರಾಮರವಾಗಿರಲಿ ಎಂದು ಸಂದೇಶ ಸಾರುವಂತಹ ಸೂರ್ಯ ಹಾಗೂ ಚಂದ್ರ ಶಿಲ್ಪ ಕಲೆಯೊಂದಿಗೆ ವ್ಯಕ್ತಿ ಅಂದರೆ ವಾಮನ ಅವರ ಒಂದು ಕೈಯಲ್ಲಿ ಕೊಡೆ ಇನ್ನೊಂದು ಕೈಯಲ್ಲಿ ಕಮಂಡಲವಿದೆ. ಇದು ವಾಮನ ಶಿಲ್ಪ ಕಲೆಯಲ್ಲಿ ಸಹಜವಾಗಿ ಕಂಡು ಬರುತ್ತದೆ.

ಅಂತೆಯೇ ವಾಮನ ಮುದ್ರಿಕೆಯ ಕಲ್ಲಿನ ಅಣತಿ ದೂರದಲ್ಲಿ ವಾಮನ ಮುದ್ರಿಕೆ ಕಲ್ಲು ಶ್ರೀ ವೀರಾಂಜನೇಯ ದೇಗುಲದ ಇತಿಹಾಸದ ಮೇಲೆ ಬೆಳಕು ಚೆಲ್ಲುವಂತಿದೆ.
ಈ ಹಿಂದೆ ನೇರಳಕಟ್ಟೆಯ ಬಾವಿಕಟ್ಟೆ ಬಳಿ, ಕಂದಾವರದ ಶ್ರೀ ವೀರಾಂಜನೇಯ ದೇವಾಲಯದ ಬಳಿ, ನಂದ್ರೋಳ್ಳಿ ಶ್ರೀ ಲಕ್ಷ್ಮೀನಾರಾಯಣ ದೇವಾಲಯದ ಬಳಿ ವಾಮನ ಮುದ್ರಿಕೆ ಕಲ್ಲು ಕಂಡು ಬಂದಿದೆ.

ಈ ವಾಮನ ಮುದ್ರಿಕೆ ಕಲ್ಲುಗಳನ್ನು ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸಂಚಾಲಕ ಪ್ರದೀಪ ಕುಮಾರ್ ಬಸ್ರೂರು ಇವರು ಪತ್ತೆ ಹಚ್ಚಿದ್ದಾರೆ. ಇವರಿಗೆ ಸುರೇಂದ್ರ ಶೆಟ್ಟಿ ಗುಳ್ವಾಡಿ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಸೌಕೂರು ಇಲ್ಲಿಯ ಆಡಳಿತ ಮಂಡಳಿಯ ಸದಸ್ಯರಾಗಿರುವ ಕುಪ್ಪ ಸೌಕೂರು, ಭಾರ್ಗವ ಜೋಗಿ, ಮಧುಸೂಧನ್ ಭಟ್, ಅಭಿಷೇಕ್ ಮೊಗವೀರ ಬಾಳೆಹಿತ್ಲು ಸಹಕರಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!