spot_img
Sunday, June 14, 2026
spot_img

ಡಾ.ಬಿ. ಬಿ. ಹೆಗ್ಡೆ ಕಾಲೇಜು : ಕನ್ನಡ ಗೀತ ಗಾಯನ ಸ್ಪರ್ಧೆ

ಕುಂದಾಪುರ : ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕನ್ನಡ ವಿಭಾಗದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಅಂತರ್ ತರಗತಿ ಕನ್ನಡ ಗೀತ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಯಿತು. ಬೇರೆ ಬೇರೆ ತರಗತಿಗಳನ್ನು ಪ್ರತಿನಿಧಿಸುವ 13 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ತೀರ್ಪುಗಾರರಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರವೀಣ್ ಮೊಗವೀರ್ ಗಂಗೊಳ್ಳಿ, ಗ್ರಂಥಪಾಲಕ ಮಹೇಶ್ ನಾಯ್ಕ್, ಹಿಂದಿ ಉಪನ್ಯಾಸಕಿ ಶ್ರೀಮತಿ ರೇವತಿ ಸಹಕರಿಸಿದರು.

ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಯೋಜನಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ, ಸಹ ಯೋಜನಾಧಿಕಾರಿ ದೀಪಾ ಪೂಜಾರಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಸುಕುಮಾರ ಶೆಟ್ಟಿ ಕಮಲಶಿಲೆ ಕಾರ್ಯಕ್ರಮ ಸಂಯೋಜಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!