spot_img
Monday, April 13, 2026
spot_img

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಕೋಟಿ ಕಂಠ ಗೀತ ಗಾಯನ

ಕುಂದಾಪುರ: ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ , ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಅನುಷ್ಠಾನಗೊಳಿಸಿದ ಕೋಟಿ ಕಂಠ ಗೀತಗಾಯನ ಕಾರ್ಯಕ್ರಮವನ್ನು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪ್ರಾಂಶುಪಾಲರನ್ನು ಒಳಗೊಂಡಂತೆ ಸಮೂಹ ಗೀತಗಾಯನ ಯಶಸ್ವಿಯಾಗಿ ನೆರವೇರಿತು.

ಕ್ಲಪ್ತ ಸಮಯಕ್ಕೆ ಸರಿಯಾಗಿ ಆರಂಭಗೊಂಡು ವಿದ್ಯಾರ್ಥಿಗಳೆಲ್ಲರೂ ಸಮವಸ್ತ್ರ ಧರಿಸಿ ಶಿಸ್ತು ಬದ್ಧವಾಗಿ ಸರ್ಕಾರವು ನಿಗದಿಪಡಿಸಿದ ಗೀತೆಗಳಾದ ಜಯಭಾರತ ಜನನಿಯ ತನುಜಾತೆ, ಉದಯವಾಗಲಿ ಚೆಲುವ ಕನ್ನಡನಾಡು, ಬಾರಿಸು ಕನ್ನಡ ಡಂಡಿಮವ, ಹಚ್ಚೇವು ಕನ್ನಡದ ದೀಪ , ವಿಶ್ವವಿನೂತನ ವಿದ್ಯಾಚೇತನ, ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು ಎನ್ನುವ ಗೀತೆಯನ್ನು ಹಿನ್ನೆಲೆ ಸಂಗೀತದೊಂದಿಗೆ ಹಾಡಿದರು.

ಈ ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಜ್ಞಾನ್ ಎಜುಕೇಶನಲ್ ಟ್ರಸ್ಟಿನ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ ರಮೇಶ್ ಶೆಟ್ಟಿಯವರು ವಹಿಸಿದ್ದರು.

ವೇದಿಕೆಯಲ್ಲಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಖಜಾಂಚಿಯಾದ ಭರತ್ ಶೆಟ್ಟಿ , ಪ್ರೌಢ ಶಾಲೆಯ ಮುಖ್ಯಶಿಕ್ಷಕಿಯಾದ ಶ್ರೀಮತಿ ಸುರೇಖಾ ಆಚಾರ್ಯ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ಶಿಕ್ಷಕರಾದ ಶರತ್ ಕುಮಾರ್ ರವರು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗೈದು ಕಾರ್‍ಯಕ್ರಮ ನಿರೂಪಿಸಿದರು. ಶಾಲೆ ಮತ್ತು ಕಾಲೇಜಿನ ಶಿಕ್ಷಕ, ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!