Thursday, November 21, 2024

ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಕುಂದಾಪುರ, ಅ.31: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕವಾಗಿಯೂ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಅವಕಾಶಗಳನ್ನು ಒದಗಿಸಿಕೊಡಲಾಗುತ್ತಿದ್ದು, ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಕೀರ್ತಿ ತರುವ ಕೆಲಸ ಮಾಡಬೇಕು. 135 ವರ್ಷಗಳ ಇತಿಹಾಸ ಹೊಂದಿರುವ ಈ ಬೋರ್ಡ್ ಹೈಸ್ಕೂಲ್ ರಾಜ್ಯಮಟ್ಟದಲ್ಲಿ ಹೆಸರಾದ ವಿದ್ಯಾಸಂಸ್ಥೆ. ರಾಷ್ಟ್ರ, ರಾಜ್ಯ ಮಟ್ಟದ ತನಕ ಈ ಸಂಸ್ಥೆಯ ಪ್ರತಿಭೆಗಳು ಪ್ರತಿನಿಧಿಸಿದ್ದು, ವಲಯ ಮಟ್ಟದ ಪ್ರತಿಭಾ ಕಾರಂಜಿಯ ಮೂಲಕ ಪ್ರತಿಭೆಗಳು ರಾಜ್ಯಮಟ್ಟವನ್ನು ಪ್ರತಿನಿಧಿಸುವಂತಾಗಲಿ ಎಂದು ಪುರಸಭಾ ಸದಸ್ಯ, ಪುರಸಭಾ ಮಾಜಿ ಅಧ್ಯಕ್ಷರಾದ ಮೋಹನದಾಸ ಶೆಣೈ ಹೇಳಿದರು.

ಅವರು ಕುಂದಾಪುರ ಸರಕಾರಿ ಪ.ಪೂ ಕಾಲೇಜಿನ ಶ್ರೀ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ-ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಮತ್ತು ಸರಕಾರಿ ಪದವಿಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್) ಕುಂದಾಪುರ ಇವರ ಆಶ್ರಯದಲ್ಲಿ ಅ.31ರಂದು ನಡೆದ 2022-23ನೇ ಸಾಲಿನ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕುಂದಾಪುರ ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ. ಸ್ಪರ್ಧಾಸ್ಪೂರ್ತಿಯಿಂದ ವಿದ್ಯಾರ್ಥಿಗಳು ಭಾಗವಹಿಸಬೇಕು. ಸೋಲು ಎದುರಾದರೆ ಕುಗ್ಗದೆ, ಸೋಲೆ ಗೆಲುವಿನ ಮೆಟ್ಟಿಲು ಎನ್ನುವ ಮನೋಭಾವದಿಂದ ಭಾಗವಹಿಸಬೇಕು. ಸವಾಲುಗಳನ್ನು ಎದುರಿಸಿ ಮುನ್ನೆಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ ಶಿವರಾಜ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತೀಶ ಕುಮಾರ್, ಬಾಂಡ್ಯ ಶಿಕ್ಷಣ ಸಂಸ್ಥೆಯ ಪ್ರವರ್ತಕರಾದ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ, ಪ್ರತಿಭಾ ಕಾರಂಜಿ ನೋಡೆಲ್ ಅಧಿಕಾರಿ ಚಂದ್ರ ನಾಯ್ಕ್, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕಾಂತರಾಜು, ಸಮನ್ವಯಾಧಿಕಾರಿ ಅಶೋಕ್, ಕಾಲೇಜು ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ., ಪ್ರೌಢಶಾಲಾ ಶಿಕ್ಷಕರ ಸಂಘದ ಪ್ರಕಾಶ, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷೆ ಜ್ಯೋತಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಪ್ರೌಢಶಾಲಾ ಶಿಕ್ಷರ ಸಂಘದ ತಾಲೂಕು ಅಧ್ಯಕ್ಷ ಗಣೇಶ ಕುಮಾರ್ ಶೆಟ್ಟಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ, ಪ್ರೌಢಶಾಲಾ ಅನುದಾನಿತ ಶಿಕ್ಷಕರ ಸಂಘದ ಅಧ್ಯಕ್ಷ ಪ್ರದೀಪ ಕುಮಾರ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ತಾಲೂಕು ಅಧ್ಯಕ್ಷ ಶೇಖರ, ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ನಾರಾಯಣ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬಾಂಡ್ಯ ಎಜ್ಯುಕೇಶನ್ ಸಂಸ್ಥೆಯ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ, ಜಯಶೀಲ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ರಾಘವೇಂದ್ರ ಚಾತ್ರಮಕ್ಕಿ ಅವರನ್ನು ಗೌರವಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ಆತಿಥೇಯ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಮಹಿಮಾ ಅವರನ್ನು ಅಭಿನಂದಿಸಲಾಯಿತು.

ಉಪ ಪ್ರಾಂಶುಪಾಲ ಕಿರಣ್ ಕುಮಾರ್ ಹೆಗ್ಡೆ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಗಣೇಶ ಕಾಂಚನ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ಈ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಈಗಾಗಲೇ ಬಾಲ್ ಬ್ಯಾಡ್ಮಿಂಟನ್, ತ್ರೋಬಾಲ್ ಪಂದ್ಯಾಟಗಳು ನಡೆದಿದ್ದು, ವಲಯ ಮಟ್ಟದ ಪ್ರತಿಭಾ ಕಾರಂಜಿ ಮೂರನೇ ಕಾರ್ಯಕ್ರಮವಾಗಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!