spot_img
Monday, April 13, 2026
spot_img

ಹೋಟೆಲ್ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಕುಂದಾಪುರ: ಸುಪ್ರಬಾತ್ ಗ್ರೂಫ್ ಆಫ್ ಹೋಟೆಲ್ ಉದ್ಯಮಿ, ಶಿಕ್ಷಣಪ್ರೇಮಿ, ಕೊಡುಗೈದಾನಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಹೊರನಾಡು ಕನ್ನಡಿಗರ ವಿಭಾಗದಲ್ಲಿ ಕೃಷ್ಣಮೂರ್ತಿ ಮಂಜರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಕಳೆದ 42 ವರ್ಷಗಳಿಂದ ತೆಲಂಗಾಣದಲ್ಲಿ ಹೋಟೆಲ್ ಉದ್ಯಮದಲ್ಲಿ ಗುರುತಿಸಿಕೊಂಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಅಗಾಧವಾದ ಕೊಡುಗೆ ನೀಡುತ್ತಿರುವ ಮಂಜರು ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಿಗೂ ಉದಾರವಾಗಿ ಸ್ಪಂದಿಸುತ್ತಾ ಬಂದಿದ್ದಾರೆ. ಮುಖ್ಯವಾಗಿ ಸರ್ಕಾರಿ ಶಾಲೆಗಳ ಅಭ್ಯುದಯದಲ್ಲಿ ಕೃಷ್ಣಮೂರ್ತಿ ಮಂಜರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದು 7 ಸರಕಾರಿ ಶಾಲೆಗಳನ್ನು ಎಂ.ಎಸ್‌ಮಂಜ ಚಾರಿಟೇಬಲ್ ಟ್ರಸ್ಟ್(ರಿ.) ಮೂಲಕ ದತ್ತು ಸ್ವೀಕರಿಸಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮಿಸುತ್ತಿದ್ದಾರೆ.

ಜೊತೆಯಲ್ಲಿ ಆಶಕ್ತರಿಗೆ ವೈದ್ಯಕೀಯ ನೆರವು, ದೇವಾಲಯಗಳ ಜೀರ್ಣೋದ್ದಾರಕ್ಕೆ ಕೊಡುಗೆ, ಬಡವರ ಗೃಹ ನಿರ್ಮಾಣ, ಮದುವೆ, ಉನ್ನತ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡುತ್ತಾ ಬಂದಿದ್ದಾರೆ. ಸಂಘ ಸಂಸ್ಥೆಗಳ ಬೆಳವಣಿಗೆಗೂ ಪೂರಕವಾಗಿ ಸ್ಪಂದಿಸುತ್ತಿದ್ದಾರೆ. ಇವರ ನಿಸ್ಪಾರ್ಥ ಸೇವೆಗೆ ಯೋಗ್ಯವಾಗಿಯೇ ಕರ್ನಾಟಕದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!