spot_img
Monday, April 13, 2026
spot_img

ನೂಜಾಡಿ-2 ಬಗ್ವಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ರಾಜ್ಯೋತ್ಸವ ಸಂಭ್ರಮ

ಕುಂದಾಪುರ, ನ.1: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2 ಬಗ್ವಾಡಿ ಇಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕನ್ನಡಾಂಬೆಯ ಮತ್ತು ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿಗಳ ಭಾವಚಿತ್ರಕ್ಕೆ ಗೌರವ ಸಲ್ಲಿಸಲಾಯಿತು.

ವಿದ್ಯಾರ್ಥಿಗಳು ಕನ್ನಡದ ಹಾಡು, ನೃತ್ಯ ಮಾಡಿ ಕನ್ನಡದ ಬಾವುಟ ಹಿಡಿದು ಸಂಭ್ರಮಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶೈಲಜಾ ಶೆಟ್ಟಿ ಕನ್ನಡ ರಾಜ್ಯೋತ್ಸವದ ಮಹತ್ವ ವಿವರಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಶಾರದಾ, ಎಸ್.ಡಿ.ಎಂ.ಸಿ ಸದಸ್ಯರಾದ ಗೋಪಾಲ ಪೂಜಾರಿ, ಜ್ಯೋತಿ, ವಿದ್ಯಾರ್ಥಿ ಪೋಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಸಹಶಿಕ್ಷಕಿ ಸತ್ಯವತಿ ಸ್ವಾಗತಿಸಿ, ಜಯಂತಿ ವಂದಿಸಿದರು. ಶ್ವೇತಾ, ಹರ್ಷಿತ ಸಹಕರಿಸಿದರು. ಸ್ವಾತಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!