spot_img
Monday, April 13, 2026
spot_img

ಹೊಳಪು-2022 ಕ್ರೀಡಾಕೂಟ : ಲಾಂಛನ ಅನಾವರಣ

ಕೋಟ : ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ ಸಹಯೋಗದಲ್ಲಿ ನಡೆಯುವ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಜನಪ್ರತಿನಿಧಿಗಳ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಹೊಳಪು-2022 (ಜನಾಧಿಕಾರದ ಸಂಚಲನ) ಕಾರ್ಯಕ್ರಮದ ಲಾಂಛನ ಅನಾವರಣವನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ ಅನಾವರಣಗೊಳಿಸಿದರು.

ಕಾರ್ಯಕ್ರಮದ ಲಾಂಛನ ಅನಾವರಣಗೊಳಿಸಿ ಮಾತನಾಡಿದ ಕಿರಣ್ ಕೊಡ್ಗಿಯವರು ಜನಪ್ರತಿನಿಧಿಗಳು ದಿನ ನಿತ್ಯ ರಾಜಕೀಯ-ಸರಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಒತ್ತಾಡದಿಂದ ಇರುತ್ತಾರೆ ಅವರು ಸಂಭ್ರಮದಿಂದ ಭಾಗವಹಿಸಲು ಇದೊಂದು ವೇದಿಕೆ, ಇಂತಹ ಕ್ರೀಡಾ ಕೂಟಗಳು ಪಂಚಾಯತ್‌ರಾಜ್ ವ್ಯವಸ್ಥೆಯ ವಿಕೇಂದ್ರಿಕರಣಕ್ಕೆ ಒಂದು ಹೆಜ್ಜೆಯಾಗಲಿದೆ ಎಂದರು.

ಕಾರಂತ ಪ್ರತಿಷ್ಠಾನ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಮಾತನಾಡಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಇನ್ನಷ್ಟೂ ಗಟ್ಟಿಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದ್ದು ಪಕ್ಷ ಭೇದ ಮರೆತು ಉಡುಪಿ-ದಕ್ಷಿಣ ಕನ್ನಡದ ೬೦೦೦ ಕ್ಕೂ ಮಿಕ್ಕಿ ಜನಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮ ನವೆಂಬರ್ ೨೬ ರಂದು ಕೋಟದ ವಿವೇಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ರಾಜು ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಕಾರಂತ ಪ್ರತಿಷ್ಠಾನದ ಸದಸ್ಯರು, ಪಂಚಾಯತ್ ಅಧಿಕಾರಿ ವರ್ಗ, ಥೀಮ್ ಪಾರ್ಕ್, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೆಂದ್ರ ಕುಮಾರ್ ನಿರೂಪಿಸಿ, ಸಮಾಜ ಕಲ್ಯಾಣ ಇಲಾಖೆಯ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!