spot_img
Friday, July 31, 2026
spot_img

ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ಹುಟ್ಟೂರ ಸನ್ಮಾನ

ಕುಂದಾಪುರ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ಹುಟ್ಟೂರ ಸಮ್ಮಾನ ಕಾರ್ಯಕ್ರಮ ನ.5ರಂದು ಸಂಜೆ ಚಿತ್ತೂರು ಸ.ಹಿ.ಪ್ರಾ.ಶಾಲಾ ವಠಾರದಲ್ಲಿ ಸಾರ್ವಜನಿಕ ಅಭಿನಂದನಾ ಸಮಿತಿ ವತಿಯಿಂದ ನಡೆಯಲಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಕೃಷ್ಣಮೂರ್ತಿ ಮಂಜರನ್ನು ಸನ್ಮಾನಿಸಲಿದ್ದಾರೆ. ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಸದಾಶಿವ ಶೆಟ್ಟಿ, ಮಾರಣಕಟ್ಟೆ ದೇವಳದ ಅರ್ಚಕ ಎಂ.ಶ್ರೀಧರ ಮಂಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ 5ಗಂಟೆಯಿಂದ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಾಲಯದಿಂದ ಅದ್ದೂರಿಯ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಗುವುದು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!