Sunday, September 8, 2024

ಕುಂದಾಪುರದಲ್ಲಿ ಗಾಂಜಾ ವಿರುದ್ಧ ಜಾಗೃತಿ ನಡಿಗೆ-ವಾಕ್‌ಥಾನ್

ಕುಂದಾಪುರ, ನ.8: ಯುವಜನತೆ ಎಂದಿಗೂ ಗಾಂಜಾದಂತಹ ಮಾದಕ ಪದಾರ್ಥಗಳ ವ್ಯಸನಕ್ಕೆ ಬಲಿಯಾಗಬಾರದು. ಇದರ ದುಷ್ಪರಿಣಾಮದ ಬಗ್ಗೆ ಜಾಗೃತರಾಗಬೇಕು, ಶಿಕ್ಷಣ ಸಂಸ್ಥೆಗಳ ಪರಿಸರದಲ್ಲಿ ಕಂಡುಬಂದರೆ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು. ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ಪ್ರಮುಖವಾದುದು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್ ಹೇಳಿದರು.

ಅವರು ಜನಸೇವಾ ಟ್ರಸ್ಟ್ ಮೂಡುಗಿಳಿಯಾರು, ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ, ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ, ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ, ವಕೀಲರ ಸಂಘ ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಗಾಂಜಾ ವಿರುದ್ಧ ಜಾಗೃತಿ ನಡಿಗೆ ವಾಕ್‌ಥಾನ್ ಜಾಥಾಕ್ಕೆ ಡೋಲು ಭಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಹಿರಿಯ ಸಿವಿಲ್ ನ್ಯಾಯಧೀಶ ರಾಜು ಎನ್ ಮಾತನಾಡಿ, ಮಾಧಕ ವಸ್ತುಗಳು ಅನಾದಿ ಕಾಲದಿಂದಲೂ ಸಮಾಜಕ್ಕೆ ಅಂಟಿದ ಅನಿಷ್ಠ ಪದ್ದತಿ. ಮಾಧಕ ಪದಾರ್ಥಗಳ ವ್ಯಸನ ಸಮಾಜದ ಉನ್ನತಿಗೆ ಧಕ್ಕೆಯಾಗುತ್ತಿವೆ. ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ವಿದ್ಯಾರ್ಥಿಗಳು ಮಾಧಕ ವ್ಯಸನಕ್ಕೆ ಎಂದಿಗೂ ಬಲಿಬೀಳಬಾರದು. ಈ ಮಾಫಿಯಾದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನೆಡೆಯಬೇಕು ಎಂದರು.

ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ಕೆ.ಉಮೇಶ ಶೆಟ್ಟಿ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಸರಕಾರಿ ಜೂನಿಯರ್ ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ., ಉಪ ಪ್ರಾಂಶುಪಾಲ ಕಿರಣ್ ಹೆಗ್ಡೆ ಉಪಸ್ಥಿತರಿದ್ದರು.

ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಇದರ ಉದಯ ಶೆಟ್ಟಿ ಸ್ವಾಗತಿಸಿ, ಜನಸೇವಾ ಟ್ರಸ್ಟ್‌ನ ವಸಂತ ಗಿಳಿಯಾರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಕೆ.ಸಿ ರಾಜೇಶ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಕುಂದಾಪುರ ಸರಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಚಾಲನೆ ಪಡೆದ ಜಾಥಾ ಹೊಸ ಬಸ್‌ನಿಲ್ದಾಣವನ್ನು ಹಾದು ಶಾಸ್ತ್ರೀ ಸರ್ಕಲ್ ಬಳಸಿ, ಜೂನಿಯರ್ ಕಾಲೇಜಿನಲ್ಲಿ ಸಮಾಪನ ಗೊಂಡಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!