spot_img
Tuesday, April 14, 2026
spot_img

ಕಾಳಾವರ ಚಂಪಾ ಷಷ್ಟಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪುರ: ಶ್ರೀ ಮಹಾಲಿಂಗೇಶ್ವರ ಮತ್ತು ಕಾಳಿಂಗ (ಸುಬ್ರಮಣ್ಯ) ದೇವಸ್ಥಾನ ಕಾಳಾವರ ಇದರ ಚಂಪಾ ಷಷ್ಠಿ ಮಹೋತ್ಸವ ನವೆಂಬರ್ 29, 30ರಂದು ನಡೆಯುವ ಮಹೋತ್ಸವದ ಬಗ್ಗೆ ಪೂರ್ವಭಾವಿ ಗ್ರಾಮಸ್ಥರ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಎಸ್ ಚಂದ್ರಶೇಖರ್ ಹೆಗ್ಡೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾಳಾವರ ಚಂಪಾ ಷಷ್ಟಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ಈ ಸಭೆಯಲ್ಲಿ ಕಾಳವರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಗ್ರಾಮದ ಹಿರಿಯರು, ಭಕ್ತಾದಿಗಳು ಹಾಗೂ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು ಭಾಗವಹಿಸಿದ್ದರು.

ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕೆ. ರಂಜಿತ್ ಕುಮಾರ್ ಶೆಟ್ಟಿ ಸ್ವಾಗತಿಸಿದರು, ಉಪನ್ಯಾಸಕ ಕಾಳಾವರ ಉದಯ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ವ್ಯವಸ್ಥಾಪನ ಸಮಿತಿ ಸದಸ್ಯರಾದ ಚಂದ್ರ ಪೂಜಾರಿ ಅಸೋಡು ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!