spot_img
Tuesday, April 14, 2026
spot_img

ಡೀಮ್ಡ್ ಅರಣ್ಯದ ಕುರಿತು ಸಚಿವರು, ಶಾಸಕರು ಹಾರಿಕೆಯ ಉತ್ತರ ನೀಡುವುದನ್ನು ನಿಲ್ಲಿಸಲಿ-ವಿಕಾಸ್ ಹೆಗ್ಡೆ

ಕುಂದಾಪುರ: ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಅರಣ್ಯ ಇಲಾಖೆ ಸುಮಾರು ಒಂಬತ್ತು ಲಕ್ಷ ಹೆಕ್ಟೇರಿಗೂ ಹೆಚ್ಚು ಪ್ರದೇಶವನ್ನು ಡೀಮ್ಡ್ ಅರಣ್ಯ ಎಂದು ಗುರುತಿಸಿ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿತ್ತು. ಆದರೆ ಈ ಪಟ್ಟಿಯಲ್ಲಿ ರೈತರ ಕೃಷಿ ಭೂಮಿ, ಕೊಟ್ಟಿಗೆ, ಮನೆ, ತೋಟ ಇದೆಲ್ಲವೂ ಕೂಡ ಸೇರಿದೆ. ಇವತ್ತು ರೈತರು ಇದರಿಂದ ಅತೀವ ತೊಂದರೆಗೊಳಗಾಗಿದ್ದಾರೆ. ಇದರಿಂದ ಅರ್ಜಿ ನಮೂನೆ 94ಸಿ, 53, 57 ಯಾವುದರಲ್ಲೂ ಭೂ ಮಂಜೂರಾತಿ ಆಗುತ್ತಿಲ್ಲ. ಹಿಂದೆ ಮಂಜೂರಾದ ಭೂಮಿಗೆ ಹಕ್ಕುಪತ್ರ, ಪಹಣಿ ಯಾವುದೂ ಸಿಗುತ್ತಿಲ್ಲ. ಆದರೆ ಈ ಸಮಸ್ಯೆ ಪರಿಹಾರಕ್ಕೆ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದನ್ನು ಬಿಟ್ಟು ಸಚಿವರು ಹಾಗೂ ಶಾಸಕರುಗಳು ಡೀಮ್ಡ್ ಸಮಸ್ಯೆ ಪರಿಹಾರವಾಗಿದೆ ಎನ್ನುವ ಹಾರಿಕೆಯ ಉತ್ತರವನ್ನು ಕೊಟ್ಟು ಮುಗ್ದ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಇನ್ನಾದರೂ ರೈತರ, ಜನಸಾಮಾನ್ಯರ ಅತೀ ದೊಡ್ಡ ಸಮಸ್ಯೆಯಾಗಿರುವ ಈ ಡೀಮ್ಡ್ ಅರಣ್ಯ ಎನ್ನುವ ಅಧಿಕಾರಶಾಹಿ ನಿರ್ಮಿತ ಸಮಸ್ಯೆಯನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಿ ಎಂದು ಉಡುಪಿ ಜಿಲ್ಲಾ ರೈತ ಸಂಘದ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!