spot_img
Tuesday, April 14, 2026
spot_img

ವಂಡ್ಸೆ: ಅಗಲಿದ ಉದಯ ಪೂಜಾರಿಗೆ ನುಡಿನಮನ

ವಂಡ್ಸೆ: ಅ.29ರಂದು ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ ಮಾತೃಭೂಮಿ ಯುವ ಸಂಘಟನೆ ಸದಸ್ಯ, ಆತ್ರಾಡಿ ಬಳಿಹಿತ್ಲು ಉದಯ ಪೂಜಾರಿ ಅವರಿಗೆ ನುಡಿನಮನ ಸಲ್ಲಿಸುವ ಶ್ರದ್ಧಾಂಜಲಿ ಸಭೆ ಮಾತೃಭೂಮಿ ಯುವ ಸಂಘಟನೆ ಆತ್ರಾಡಿ ವತಿಯಿಂದ ವಂಡ್ಸೆಯ ಮಹಾತ್ಮಗಾಂಧಿ ಸಭಾಭವನದಲ್ಲಿ ನಡೆಯಿತು.

ಗ್ರಾಮ ಪಂಚಾಯತಿ ಅಧ್ಯಕ್ಷ, ಮಾತೃಭೂಮಿ ಯುವ ಸಂಘಟನೆ ಗೌರವ ಸಲಹೆಗಾರರಾದ ಉದಯ ಕುಮಾರ್ ಶೆಟ್ಟಿ ನುಡಿನಮನ ಸಲ್ಲಿಸಿ, ಎಳೆಯ ಪ್ರಾಯದಲ್ಲಿ ಉದಯ ಅಗಲಿಕೆ ಕುಟುಂಬಕ್ಕೆ ಮಾತ್ರವಲ್ಲ ಸಮಾಜಕ್ಕೆ ದೊಡ್ಡ ನಷ್ಟವಾಗಿದೆ ಎಂದರು.

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಕಲ್ಮಡಿ ನುಡಿನಮನ ಸಲ್ಲಿಸಿ, ಆತ್ರಾಡಿ ಬಳಿಹಿತ್ಲು ಮಾಸ್ತಿ ಮತ್ತು ನಾರಾಯಣ ಪೂಜಾರಿಯವರ ಪುತ್ರರಾದ ಉದಯ, ಆತ್ರಾಡಿ ಮತ್ತು ವಂಡ್ಸೆ ಶಾಲೆಯಲ್ಲಿ ವಿದ್ಯಾಭ್ಯಾಸ ಪೂರೈಸಿ ಬೆಂಗಳೂರಿನಲ್ಲಿ ಬದುಕನ್ನು ಕಟ್ಟಿಕೊಳ್ಳಲು ಹೋದರೂ ಕೂಡಾ ಊರಿನ ಆಗುಹೋಗುಗಳಲ್ಲಿ ಪಾಲ್ಗೊಳ್ಳುತ್ತಿದ್ದ ಉತ್ಸಾಹಿ ಯುವಕನಾಗಿದ್ದ. ಉದಯ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತನು ನೀಡಲಿ ಎಂದರು.

ಮಾತೃಭೂಮಿ ಯುವ ಸಂಘಟನೆ ಸ್ಥಾಪಕ ಅಧ್ಯಕ್ಷ ಗಣೇಶ ದೇವಾಡಿಗ ಅಡಿಕೆಕೊಡ್ಲು ನುಡಿನಮನ ಸಲ್ಲಿಸಿದರು. ಮಾತೃಭೂಮಿ ಯುವ ಸಂಘಟನೆ ಮಾಜಿ ಅಧ್ಯಕ್ಷರಾದ ಸಂದೇಶ ಶೆಟ್ಟಿ ಅಡಿಕೆಕೊಡ್ಲು, ರಮೇಶ ಪೂಜಾರಿ ಬಳಿಹಿತ್ಲು, ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು ಪುಷ್ಪನಮನ ಸಲ್ಲಸಿದರು.

ಮಾತೃಭೂಮಿ ಯುವ ಸಂಘಟನೆ ಅಧ್ಯಕ್ಷ ಪ್ರಸಾದ್ ಆಚಾರ್ಯ ಆತ್ರಾಡಿ ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!