spot_img
Tuesday, April 14, 2026
spot_img

ವಂಡ್ಸೆ ಶಾಲೆಗೆ ಕಿಯೋನಿಕ್ಸ್ ಸಂಸ್ಥೆಯಿಂದ 8 ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್‌ಗೆ ರೂ.5 ಲಕ್ಷ ಕೊಡುಗೆ

ಕುಂದಾಪುರ: ವಂಡ್ಸೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ದಿ ನಿಗಮ ನಿಯಮಿತ (KEONICS) ಇದರ ಸಿ.ಎಸ್.ಆರ್ ನಿಧಿಯಿಂದ ಶಾಲೆಗೆ 8 ಕಂಪ್ಯೂಟರ್ ಹಾಗೂ ಸ್ಮಾರ್ಟ್ ಬೋರ್ಡ್‌ಗಾಗಿ ರೂ.5 ಲಕ್ಷದ ಚೆಕ್ ಅನ್ನು ಸಂಸ್ಥೆಯ ನಿರ್ದೇಶಕರಾದ ಕೆ.ಕರುಣಾಕರ ಶೆಟ್ಟಿ ಬಾಳಿಕೆರೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉದಯಕುಮಾರ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯೆ ಶಶಿಕಲಾ ವಂಡ್ಸೆ, ಎಸ್.ಡಿ.ಎಂ.ಸಿ ಸದಸ್ಯೆ ನಯನ, ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ಆಶಾ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಂಡ್ಸೆ ಶಾಲೆ ಆಂಗ್ಲಮಾದ್ಯಮ ವಿಭಾಗ ಆರಂಭವಾದ ಬಳಿಕ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದ್ದು ಈ ಶೈಕ್ಷಣಿಕ ಸಾಲಿನಲ್ಲಿ 470 ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ವಿದ್ಯಾಭಿಮಾನಿ ದಾನಿಗಳು, ಶಿಕ್ಷಣಕ್ಕೆ ಪೂರಕವಾಗಿ ಸ್ಪಂದಿಸುವ ಸಂಸ್ಥೆಗಳ ಮೂಲಕ ವಿವಿಧ ಕೊಡುಗೆಗಳನ್ನು ಸ್ವೀಕರಿಸಿ ಶಾಲೆಯ ಅಭಿವೃದ್ದಿಗೆ ಒತ್ತು ನೀಡಲಾಗುತ್ತಿದ್ದು, ಕಂಪ್ಯೂಟರ್ ಶಿಕ್ಷಣ ಹಾಗೂ ಸ್ಮಾರ್ಟ್ ಕ್ಲಾಸ್‌ಗೆ ಕಿಯೋನಿಕ್ಸ್ ಸಂಸ್ಥೆಯ ಕೊಡುಗೆ ಮಹತ್ವದ್ದಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!