spot_img
Tuesday, April 14, 2026
spot_img

ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಶೋಕ ಬೀಜಾಡಿ ಆಯ್ಕೆ


ಕುಂದಾಪುರ: ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ ಪೂಜಾರಿ ಬೀಜಾಡಿ ಆಯ್ಕೆಯಾಗಿದ್ದಾರೆ.

ನೂತನ ಉಪಾಧ್ಯಕ್ಷರಾಗಿ ವಾದಿರಾಜ ಹತ್ವಾರ್ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಅಭಿವೃದ್ದಿ ಅಧಿಕಾರಿ ಸುನಿಲ್ ಕುಮಾರ್ ಸಹಕರಿಸಿದ್ದರು.

ನ.21 ಸೋಮವಾರ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಇದರಲ್ಲಿ ಅಶೋಕ ಪೂಜಾರಿಯವರು ಅವಿರೋಧವಾಗಿ ಆಯ್ಕೆಯಾದರು. ಅಶೋಕ್ ಪೂಜಾರಿಯವರು ಈ ಹಿಂದೆ ಕೂಡಾ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಇದೀಗ ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ. ಕುಂದಾಪುರ ತಾಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಇವರು, ಕುಂದಾಪುರ ತಾಲೂಕು ಪಂಚಾಯತಿನ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾಗಿ, ಬೀಜಾಡಿ ಮೀನುಗಾರರ ಸಹಕಾರಿ ಸಂಘದ ನಿರ್ದೇಶಕರಾಗಿ, ಬೀಜಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕೋಟೇಶ್ವರ ವ್ಯವಸಾಯ ಸೆವಾ ಸಹಕಾರಿ ಸಂಘದ ನಿದೇಶಕರಾಗಿ ಕಳೆದ 19 ವರ್ಷಗಳಿಂದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಂತರ ನಡೆದ ಅಭಿನಂದನಾ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಂ.ಮಹೇಶ ಹೆಗ್ಡೆ, ಟಿ.ಎ.ಪಿ.ಸಿ ಎಂ.ಎಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಕುಂದಾಪುರ ಭೂ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ,,ಹಿರಿಯ ಸದಸ್ಯರಾದ ಶೇಷಗಿರಿ ಗೋಟ ಮುಂತಾದವರು ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರಾದ ಅಶೋಕ ಪೂಜಾರಿ ಬೀಜಾಡಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷರಾದ ಶರತ್ ಕುಮಾರ್ ಹೆಗ್ಡೆ ಸ್ವಾಗತಿಸಿದರು. ಸಂಘದ ನಿರ್ದೇಶಕರುಗಳಾದ ಭರತ್ ಕುಮಾರ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಗೋಪಾಲ ಶೆಟ್ಟಿ, ಎಂ.ಮೋಹನದಾಸ ಶೆಟ್ಟಿ, ನರಸಿಂಹ ಪೂಜಾರಿ, ನವೀನ್ ಕುಮಾರ್ ಹೆಗ್ಡೆ, ಸುರೇಶ ಕೆ.ವಿ. ಶ್ರೀಮತಿ ಆಶಾಲತಾ ಶೆಟ್ಟಿ, ಶ್ರೀಮತಿ ಸುಧಾ, ಶ್ರೀಮತಿ ಚಿಕ್ಕು, ಹಾಗು ವೃತ್ತಿಪರ ನಿರ್ದೇಶಕರಾದ ಗೋಪಾಲ ಪೂಜಾರಿ, ವಲಯ ಮೇಲ್ವಿಚಾರಕರಾದ ಸಂದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವೇಶ್ವರ ಐತಾಳ್ ವಂದಿಸಿದರು. ರಾಜಶೇಖರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!