ಕುಂದಾಪುರ: ವೃತ್ತಿ-ಪ್ರವೃತ್ತಿಗಳಲ್ಲಿ ಸೋಲು ಸ್ವೀಕರಿಸಬಲ್ಲ ಮನೋಭಾವದ ಬೆಳವಣಿಗೆಯೇ ಬದುಕಿನಲ್ಲಿ ಗೆಲ್ಲಬಲ್ಲ ಸಾಮರ್ಥ್ಯ ಸೃಷ್ಟಿಸುತ್ತದೆ ಎಂದು ಪದವಿ ಪೂರ್ವ ಕಾಲೇಜು ಕೊಲ್ಲೂರು ಇಲ್ಲಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು.
ಅವರು ನ. 21ರಂದು ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲೆ ರಾಗಿಣಿ, ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ವೆಂಕಟರಮಣ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೃಷ್ಣ ಅಡಿಗ, ಶ್ರೀ ವೆಂಕಟರಮಣ ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿನಿ ಆವಂತಿಕಾ ಸ್ವಾಗತಿಸಿದರು, ರಿಶಾಲ್ ವಂದಿಸಿದರು, ರುತ್ ಕಾರ್ಯಕ್ರಮ ನಿರೂಪಿಸಿದರು.