spot_img
Wednesday, January 22, 2025
spot_img

ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪುಸ್ತಕ ಪ್ರದರ್ಶನ

ಉಡುಪಿ: ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ-2022ದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪುಸ್ತಕ ಪ್ರದರ್ಶನ ಪುಸ್ತಕ ಪ್ರೀತಿ – ನೋಡಿ ಕಲಿ, ಓದಿ ತಿಳಿ ವಿಸ್ತರಣಾ ಕಾರ್ಯಕ್ರಮ ಕಾಲೇಜಿನ ಗ್ರಂಥಾಲಯದಲ್ಲಿ ನಡೆಯಿತು.

ಸರಕಾರಿ ಸಂಯುಕ್ತ ಪೌಢಶಾಲೆ, ಅಜ್ಜರಕಾಡು‌ ಇಲ್ಲಿಯ ಮುಖ್ಯೋಪಾಧ್ಯಾಯರಾದ ಉಷಾ ಕಿರಣ್‌ ಗ್ರಂಥಾಲಯ ಪಿತಾಮಹಾ ಡಾ. ಎಸ್. ಆರ್. ರಂಗನಾಥನ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಪುಸ್ತಕ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಸಂಯೋಜಕರಾದ ಮತ್ತು ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಯಶೋಧಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತಾನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ ಎಸ್ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ-2022ರ ಅಂಗವಾಗಿ ಕಾಲೇಜಿನ ಗ್ರಂಥಾಲಯದ ವತಿಯಿಂದ ಪುಸ್ತಕ ಎರವಲು ಪಡೆಯುವ ವಿಶೇಷ ಸೌಲಭ್ಯವನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಒದಗಿಸಲಾಯಿತು. ಸರಕಾರಿ ಸಂಯುಕ್ತ ಪ್ರೌಢಶಾಲೆಯ‌ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು, ಕಾಲೇಜಿನ ಕ್ಷೇಮಪಾಲನಾಧಿಕಾರಿ ಡಾ. ವಾಣಿ‌ಆರ್ ಬಲ್ಲಾಳ್, ಗ್ರಂಥಾಲಯ ಸಹಾಯಕರಾದ ಕು. ಶಮ್ಮಿ ವಿಜಯಲಕ್ಷ್ಮೀ, ಲಾವಣ್ಯ ಹಾಗೂ ಕಾಲೇಜಿನ ವಿದ್ಯಾರ್ಥಿನಿಯರು ಉಪಸ್ಥಿರಿತದ್ದರು

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!