spot_img
Saturday, April 18, 2026
spot_img

ಶ್ರೀ ಮದ್ಭಗವದ್ಗೀತಾ ಅಭಿಯಾನ: ವಿಶ್ವ ವಿನಾಯಕ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

ತೆಕ್ಕಟ್ಟೆ: ಶ್ರೀ ಮದ್ಭಗವದ್ಗೀತಾ ಜಯಂತಿ ಆಚರಣಾ ಸಮಿತಿ ಶ್ರೀ ಸೀತಾರಾಮಚಂದ್ರ ದೇವಸ್ಥಾನ, ಕುಂದಾಪುರ ಇವರ ಆಶ್ರಯದಲ್ಲಿ ಜರುಗಿದ ಕಿರಿಯ, ಹಿರಿಯ ಪ್ರಾಥಮಿಕ ವಿಭಾಗ ಮತ್ತು ಪ್ರೌಢಶಾಲಾ ವಿಭಾಗದ ಭಗವದ್ಗೀತೆ ಕಂಠಪಾಠ, ಸಾಮೂಹಿಕ ಕಂಠಪಾಠ, ರಸಪ್ರಶ್ನೆ, ಭಾಷಣ ಸ್ಪರ್ಧೆಯಲ್ಲಿ ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ವೈಯಕ್ತಿಕ ಶ್ಲೋಕ ಕಂಠಪಾಠದಲ್ಲಿ ಅನರ್ಘ್ಯ ದ್ವಿತೀಯ, ಸಾಮೂಹಿಕ ಶ್ಲೋಕ ಕಂಠಪಾಠದಲ್ಲಿ ವೈಭವ್ ಪಿ. ಪೂಜಾರಿ, ಅನರ್ಘ್ಯ, ಸುಹಾನ್, ಶ್ರದ್ಧಾ, ಸಮೃದ್ಧಿ ತೃತೀಯ, ರಸಪ್ರಶ್ನೆ ಸ್ಪರ್ಧೆಯಲ್ಲಿ ಆರಾಧ್ಯ, ತನ್ವಿತ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸ್ಪರ್ಶ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪ್ರೌಢಶಾಲಾ ವಿಭಾಗದಲ್ಲಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರ್ವಶ್ರೀ, ಅಭಿಜ್ಞಾ ಪ್ರಥಮ ಸ್ಥಾನ, ಸಾಮೂಹಿಕ ಶ್ಲೋಕ ಕಂಠಪಾಠದಲ್ಲಿ ಸರ್ವಶ್ರೀ, ತ್ರಿಶಾ, ವಂದಿತಾ, ಅಭಿಜ್ಞಾ, ಮಿಥಾಲಿ, ದ್ವಿತೀಯ ಸ್ಥಾನ, ಭಾಷಣ ಸ್ಪರ್ಧೆಯಲ್ಲಿ ವರ್ಷಿತ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಅಭಿನಂದಿಸಲಾಯಿತು ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ, ಪ್ರಾಂಶುಪಾಲರಾದ ಶ್ರೀ ನಿತಿನ್ ಡಿ ಆಲ್ಮೇಡಾ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!