spot_img
Saturday, April 18, 2026
spot_img

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಸಂವಿಧಾನ ದಿನಾಚರಣೆ ಹಾಗೂ ಯುವ ಮತದಾರರ ಸೇರ್ಪಡೆ ಅಭಿಯಾನ

ಕುಂದಾಪುರ: ದೇಶದ ಮೂಲಭೂತ ಕಾನೂನಾದ ಸಂವಿಧಾನವನ್ನು ಶಾಸನಬದ್ಧವಾಗಿ ಸಮರ್ಪಿಸಿಕೊಂಡ ನವಂಬರ್ 26ನೇ ದಿನವನ್ನು ದೇಶದಾದ್ಯಂತ ಸಂವಿಧಾನ ದಿನಾಚರಣೆ ಎಂದು ಆಚರಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪ್ರವೀಣ್ ಮೊಗವೀರ ಗಂಗೊಳ್ಳಿ ಸಂವಿಧಾನದ ಮಹತ್ವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸುವುದರೊಂದಿಗೆ ಸಂವಿಧಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಜೊತೆಗೆ ಸರ್ಕಾರದ ಆದೇಶ ಮೇರೆಗೆ ಕಾಲೇಜಿನಲ್ಲಿ ಯುವ ಮತದಾರರ ಸೇರ್ಪಡೆ ಅಭಿಯಾನವನ್ನು ಹಮ್ಮಿಕೊಂಡು ಯುವ ಮತದಾರರಲ್ಲಿ ಮತದಾನದ ಮಹತ್ವದ ಬಗ್ಗೆ ತಿಳಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಪೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಉಪಪ್ರಾಂಶುಪಾಲರು, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ ಹಾಗೂ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ ರಾವ್ ಗುಜ್ಜಾಡಿ ಉಪಸ್ಥಿತರಿದ್ದರು .
ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!