spot_img
Friday, April 17, 2026
spot_img

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ: ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ಕ್ರೀಡಾಂಗಣದ ಭೂಮಿ ಪೂಜೆ

ಕುಂದಾಪುರ: ಕರ್ನಾಟಕ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಮಲ್ಲೇಶ್ವರಂ ಬೆಂಗಳೂರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ ಕುಂದಾಪುರ ಇದರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 8, 9 ಮತ್ತು 10ರಂದು ಆಯೋಜನೆ ಗೊಂಡಿರುವ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದ ಕ್ರೀಡಾಂಗಣ ಭೂಮಿ ಪೂಜೆಯನ್ನು ಡಿಸೆಂಬರ್ 1ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೆರಿಸಲಾಯಿತು.

ಊರಿನ ಪುರೋಹಿತರಾದ ಶಂಕರನಾರಾಯಣ ಉಡುಪ ಅವರ ನೇತೃತ್ವದಲ್ಲಿ ನಡೆದ ಭೂಮಿ ಪೂಜೆಯಲ್ಲಿ ಉಪಸ್ಥಿತರಿದ್ದ ಎಂ.ಎಂ.ಹೆಗ್ಡೆ ಎಜುಕೇಶನಲ್ & ಚಾರಿಟೆಬಲ್ ಟ್ರಸ್ಟ್‌ನ ಅದ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ಅವರು ಮಾತನಾಡುತ್ತಾ ಸಂಸ್ಥೆಯು ಸರ್ಕಾರದ ಬದಲು ಪದವಿ ಪೂರ್ವ ಶಿಕ್ಷಣ ಇಲಾಖೆ ನೀಡಿದ ಜವಾಬ್ದಾರಿಯನ್ನು ಸ್ವಿಕರಿಸಿ ಕಳೆದ ಕೆಲವು ದಿನಗಳಿಂದ ಸಿದ್ದತೆ ಆರಂಬಿಸಿದೆ. ಆ ನಿಟ್ಟಿನಲ್ಲಿ ಇವತ್ತು ದೇವರ ಪ್ರಾರ್ಥನೆಯೊಂದಿಗೆ ಮುಂದುವರಿದಿದೆ ಎಂದರು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅದ್ಯಕ್ಷರಾದ ಡಾ. ರಮೇಶ್ ಶೆಟ್ಟಿಯವರು ಮಾತಾನಾಡುತ್ತಾ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದ ಆಯೋಜನೆ ನಮ್ಮ ಕಾಲೇಜಿಗೆ ಒದಗಿ ಬಂದಿರುವುದು ಒಂದು ಸುವರ್ಣ ಅವಕಾಶವಾಗಿದೆ. ಅದನ್ನು ಬಹಳ ಅಚ್ಚುಕಟ್ಟಾಗಿ ನಿಬಾಯಿಸಲು ಪಣ ತೋಟ್ಟಿದ್ದೆವೆ ಎಂದರು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಮತ್ತು ಖಚಾಂಚಿ ಭರತ್ ಶೆಟ್ಟಿ ಉಪಸ್ಥಿತರಿದ್ದು ಶುಭ ಕೊರಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!