spot_img
Friday, April 17, 2026
spot_img

ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ‘ಜನತಾ ಗೀತೋತ್ಸವ 2022’

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಜನತಾ ಗೀತೋತ್ಸವ-2022 ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರ ವಹಿಸಿದ್ದರು.

ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಅವರು ಕನ್ನಡ ನಾಡು-ನುಡಿ-ಸಂಸ್ಕ್ರತಿಗೆ ಸಂಬಂಧಿಸಿದ ಗೀತ ಗಾಯನದಂತಹ ಕಾರ್ಯಕ್ರಮಗಳು ಅರ್ಥಪೂರ್ಣವಾದದ್ದು ಎನ್ನುತ್ತಾ ಕಾಲೇಜಿನ ವಿದ್ಯಾರ್ಥಿ ಪ್ರತಿಭೆಗಳನ್ನು ಅಭಿನಂದಿಸಿದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನಾಗರಾಜ ಪಾಣರರವರು ಜಾನಪದ ಸಂಸ್ಕೃತಿಯ ಕುರಿತು ಮಾತನಾಡುತ್ತಾ ಕಾಂತಾರ ಸಿನಿಮಾದಲ್ಲಿ ತಾವು ಹಾಡಿರುವ ಜಾನಪದ ಹಾಡುಗಳನ್ನು ಹಾಡಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರರವರು ಕನ್ನಡದ ಅರ್ಥಪೂರ್ಣ ಕಾರ್ಯಕ್ರಮಗಳ ಕುರಿತು ಶ್ಲಾಘನೆ ವ್ಯಕ್ತಪಡಿಸಿದರು. ಜನತಾ ಪ್ರೌಢಶಾಲೆಯ ವೃತ್ತಿ ಶಿಕ್ಷಣ ಶಿಕ್ಷಕಿ ಹಾಗೂ ವಿದುಷಿ ಪ್ರವಿತಾ ಅಶೋಕ್ ಸಂಗೀತದ ಅಭ್ಯಾಸವನ್ನು ರೂಢಿಸಿಕೊಳ್ಳುವಂತ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾಲೇಜಿನ ಉಪಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ರವರು ಅತಿಥಿಗಳನ್ನು ಪರಿಚಯಿಸಿ, ವಿದ್ಯಾರ್ಥಿಗಳಾದ ಪ್ರಜ್ವಲ್ , ಕೌಶಿಕ್, ವರ್ಣಾ, ಸೃಜನ್ ನಿರೀಕ್ಷಾ,ಐಶ್ವರ್ಯ ಮಾನ್ಯ ಶ್ರೀ, ಇಂಪಾ, ಅನಘಾ, ಕಮಲ್ ಕನ್ನಡ ಗೀತೆಗಳನ್ನು ಹಾಡಿದರು. ಹಾಗೂ ಹಿನ್ನಲೆ ಸಂಗೀತದಲ್ಲಿ ವಿದ್ಯಾರ್ಥಿಗಳಾದ ಸುಬ್ರಹ್ಮಣ್ಯ ಹಾಗೂ ತಬಲಾದಲ್ಲಿ ಕೌಶಲ್ ಸಹಕರಿಸಿದರು.

ವಿದ್ಯಾರ್ಥಿಗಳಾದ ಕೌಶಿಕ್ ಪ್ರಾರ್ಥಿಸಿ, ಪ್ರಾಂಜಲ ಸ್ವಾಗತಿಸಿ, ವರ್ಷಾ ರವಿಶಂಕರ್, ಭೂಮಿಕಾ ಹಾಗೂ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿ, ರಾಮರಕ್ಷ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!