spot_img
Friday, April 17, 2026
spot_img

ಮುದೂರಿಯಲ್ಲಿ ಭಂಡಾರಕಾರ್ಸ್ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಕುಂದಾಪುರ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದೂರಿ, ಹಾಲಾಡಿಯಲ್ಲಿ ಭಂಡಾರಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಡಿ.23ರಂದು ನಡೆಯಿತು.

ಹಾಲಾಡಿ ಗ್ರಾ.ಪಂ. ಉಪಾಧ್ಯಕ್ಷ ಜನಾರ್ಧನ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ ನಾರಾಯಣ ಶೆಟ್ಟಿ ವಹಿಸಿದ್ದರು.

ಭಂಡಾರ್ಕಾರ್ಸ್ ಪ.ಪೂ ಕಾಲೇಜು ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡಾ, ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ, ಬ್ರಹ್ಮಾವರ ವಲಯ ನಿವೃತ್ತ ಶಿಕ್ಷಣಧಿಕಾರಿ ವಸಂತ್ ಕುಮಾರ್ ಶೆಟ್ಟಿ, ಯಕ್ಷ ಗುರು ಐರೋಡಿ ಮಂಜುನಾಥ್ ಕುಲಾಲ್, ಹಾಲಾಡಿ ಗ್ರಾ.ಪಂ. ಸದಸ್ಯೆ ಹೇಮಾ, ಗೀತಾ ಫೌಂಡೇಶನ್ ಕೋಟೇಶ್ವರ ಇದರ ಅಧ್ಯಕ್ಷರಾದ ಶಂಕರ ಐತಾಳ್, ಶಿಕ್ಷಣ ಸಂಯೋಜಕರು ಹಾಲಾಡಿ ವೃತ್ತ, ಶೇಖರ್. ಯು, ಸಿ,ಸ.ಹಿ.ಪ್ರ ಶಾಲೆ, ಮೂದೂರಿ ಎಸ್.ಡಿ.ಎಂ.ಸಿ ಅಧ್ಯಕ್ಷ ಗಣೇಶ ಎಂ., ಸ.ಹಿ.ಪ್ರ ಶಾಲೆ ಮುದೂರಿ ಮುಖ್ಯೋಪಾಧ್ಯಾಯರಾದ ಸಂಜೀವ ನಾಯ್ಕ, ಹಳೆ ವಿದ್ಯಾರ್ಥಿ ಸಂಘ, ಸ. ಹಿ. ಪ್ರಾ ಶಾಲೆ, ಮುದೂರಿ ಅಧ್ಯಕ್ಷ ರಮೇಶ್ ನಾಯ್ಕ, ಮುದೂರಿ ಮೈತ್ರಿ ಯುವಕ ಮಂಡಲ ಅಧ್ಯಕ್ಷ ಗಣೇಶ್ ಮೊಗವೀರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯಕ್ಷಗುರು ಯಕ್ಷಶ್ರೀ ಐರೋಡಿ ಮಂಜುನಾಥ ಕುಲಾಲ್ ಇವರನ್ನು ಸನ್ಮಾನಿಸಲಾಯಿತು.
ಈ ದಿನ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಗುರು ಐರೋಡಿ ಮಂಜುನಾಥ್ ಕುಲಾಲ್ ಅವರ ನಿರ್ದೇಶನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರಸಂಗ ಮೀನಾಕ್ಷಿ ಕಲ್ಯಾಣ ನಡೆಯಿತು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾದ ರಾಮಚಂದ್ರ ಆಚಾರ್ ಸ್ವಾಗತಿಸಿ, ವಿದ್ಯಾರ್ಥಿನಿ ಚಿತ್ರ ವಂದಿಸಿ, ಸುಶ್ಮಿತಾ ನಿರೂಪಿಸಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!