Sunday, September 8, 2024

ಹೆಮ್ಮಾಡಿ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಕುಂದಾಪುರ: ಕೋವಿಡ್ ಹಿನ್ನೆಲೆ ಎರಡು ವರ್ಷಗಳ ಬಳಿಕ ಪ್ರತೀ ಶಾಲೆಗಳಲ್ಲಿಯೂ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಕ್ರೀಡಾಕೂಟ ನಡೆಯುತ್ತಿರುವುದು ಸಂತಸದ ವಿಚಾರ. ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡು ಪ್ರತಿಭಾನ್ವಿತ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

ಅವರು ಇತ್ತೀಚೆಗೆ ಹೆಮ್ಮಾಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಶಾಲಾ ವಾರ್ಷಿಕ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀಕಾಂತ ಹೆಮ್ಮಾಡಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಎಷ್ಟು ಮುಖ್ಯವೋ, ಕ್ರೀಡೆಯೂ ಅಷ್ಟೇ ಮುಖ್ಯವಾಗಿದೆ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ. ನಮ್ಮ ತಪ್ಪು-ಒಪ್ಪುಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಹಾಗೂ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ ಎಂದರು.

ಹೆಮ್ಮಾಡಿ ಗ್ರಾ.ಪಂ ಅಧ್ಯಕ್ಷ ಸುಧಾಕರ ಎನ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಗ್ರಾ.ಪಂ ಸದಸ್ಯರಾದ ರಾಘವೇಂದ್ರ ಪೂಜಾರಿ ಹೆದ್ದಾರಿ ಮನೆ, ರತ್ನ, ನಿವೃತ್ತ ಮುಖ್ಯೋಪಾಧ್ಯಾಯ ಶಂಕರ ಮಡಿವಾಳ, ಎಸ್ಡಿ‌ಎಂಸಿ ಅಧ್ಯಕ್ಷೆ ರತ್ನ ನಾಯ್ಕ್, ಉಪಾಧ್ಯಕ್ಷ ರಾಘವೇಂದ್ರ ದೇವಾಡಿಗ, ಶಾಲಾ ವಾರ್ಷಿಕೋತ್ಸವ ಸಮಿತಿಯ ಗೌರವಾಧ್ಯಕ್ಷ ದೇವಪ್ಪ ಪೂಜಾರಿ, ಅಧ್ಯಕ್ಷರಾದ ಶಾಂತಾರಾಮ್ ಭಟ್, ಎಲ್.ಕೆ.ಜಿ ಯು.ಕೆ.ಜಿ ಸಮಿತಿ ಅಧ್ಯಕ್ಷೆ ಸುಮ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ವಿ. ದಿವಾಕರ ಸ್ವಾಗತಿಸಿದರು. ಶಿಕ್ಷಕಿ ಪ್ರೆಸಿಲ್ಲಾ ವಂದಿಸಿದರು. ಸುಶೀಲ ಕಾರ್ಯಕ್ರಮ ನಿರೂಪಿಸಿದರು. ಒಲಂಪಿಯಾ ಕಾರ್ಯಕ್ರಮಕ್ಕೆ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!