Thursday, November 21, 2024

ಡಿ.30ಕ್ಕೆ ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆಯ ವಾರ್ಷಿಕೋತ್ಸವ

ವಂಡ್ಸೆ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿನ ಶಾಲಾ ವಾರ್ಷಿಕೋತ್ಸವ ಡಿ.30 ಶುಕ್ರವಾರ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ಮಾರಣಕಟ್ಟೆ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಕಲ್ಪನಾ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾ.ಪಂ.ಉಪಾಧ್ಯಕ್ಷೆ ಗೀತಾ ಅವಿನಾಶ್, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಶಾಂತ್ ಪೂಜಾರಿ, ಶಶಿಕಲಾ, ಸುಶೀಲಾ, ತಾ.ಪಂ.ಮಾಜಿ ಸದಸ್ಯ ಉದಯ ಜಿ.ಪೂಜಾರಿ, ಗ್ರಾ.ಪಂ.ಮಾಜಿ ಸದಸ್ಯ ಗುಂಡು ಪೂಜಾರಿ, ಪ್ರಕಾಶ್ ಪೂಜಾರಿ ಜೆಡ್ಡು, ದೀಪಕ್ ಕುಮಾರ್ ಶೆಟ್ಟಿ ಕಟ್ಟೆಮನೆ, ಶಿಕ್ಷಣ ಸಂಯೋಜಕ ಸತ್ಯನಾ ಕೊಡೇರಿ, ಸಿ.ಆರ್.ಪಿ ನಾಗರಾಜ ಶೆಟ್ಟಿ, ಮಂಜುಶ್ರೀ ಶಾಮಿಯಾನ ಮಾಲೀಕ ಪ್ರಶಾಂತ್, ಜೈ ಶಂಕರ್ ಶಾಮಿಯಾನ ಮಾಲೀಕ ಶ್ರೀನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ರಾತ್ರಿ 8ಗಂಟೆಗೆ ವಾರ್ಷಿಕೋತ್ಸವ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ದಿ ನಿಗಮ ನಿ ಇದರ ನಿರ್ದೇಶಕ ಕರುಣಾಕರ ಶೆಟ್ಟಿ ಬಾಳಿಕೆರೆ, ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ಮಾರಣಕಟ್ಟೆ, ನಿವೃತ್ತ ಟೆಲಿಕಾಂ ಇಂಜಿನಿಯರ್ ಗಿಳಿಯಾರು ಶ್ರೀಧರ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಸೀತಾರಾಮ ಶೆಟ್ಟಿ ತೊಂಬತ್ತು, ಎಂ.ಸಿ.ಐ ಸಮೂಹ ಸಂಸ್ಥೆ ಮೈಸೂರು ಇದರ ಆಡಳಿತ ನಿರ್ದೇಶಕರಾದ ಪ್ರಭಾಕರ ಶೆಟ್ಟಿ ತೊಂಬತ್ತು, ವಂಡ್ಸೆ ವಾತ್ಸಲ್ಯ ಕಾಂಪ್ಲೆಕ್ಸ್‌ನ ಆನಂದ ಶೆಟ್ಟಿ ಎನ್. ಸಬ್ಲಾಡಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ ಕೆರಾಡಿ, ವಂಡ್ಸೆ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ಮಂಜಯ್ಯ ಶೆಟ್ಟಿ ಸಬ್ಲಾಡಿ, ಎಪಿ‌ಎಂಸಿ ಸದಸ್ಯರಾದ ಸಂಜೀವ ಪೂಜಾರಿ ವಂಡ್ಸೆ, ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ ವಂಡ್ಸೆ, ಮಹಮ್ಮದ್ ಇಕ್ಬಾಲ್ ವಂಡ್ಸೆ,. ಚಾರ್ಟೆಡ್ ಅಕೌಂಟೆಂಟ್ ವಿ.ಕೆ ಸುಧಾಕರ ಶೆಟ್ಟಿ ವಂಡ್ಸೆ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ., ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷರಾದ ವೆಂಕಟೇಶ್, ಸೂಪರ್ ಗ್ರೇಡ್ ಇಲೆಕ್ಟ್ರಿಕಲ್ ಗುತ್ತಿಗೆದಾರರಾದ ಕೆ.ಆರ್.ನಾಯ್ಕ್ ಕುಂದಾಪುರ, ಶೆಟ್ಟಿ ಕಾಂಪ್ಲೆಕ್ಸ್ ವಂಡ್ಸೆ ಇದರ ಶೇಖರ ಶೆಟ್ಟಿ, ಚಾರ್ಟಡ್ ಅಕೌಂಟೆಂಟ್ ಸುದೀಪ್ ಶೆಟ್ಟಿ ತೆಂಕೊಡಿಗೆ, ಇಂಜಿನಿಯರ್ ವಿಘ್ನೇಶ್ ನಾಯಕ್, ವಂಡ್ಸೆ ಐತಾಳ್ ಕ್ಲಿನಿಕ್‌ನ ವೈದ್ಯ ಡಾ|ಕೌಶಿಕ್ ಐತಾಳ್, ಕ.ರಾ.ಪ್ರಾ.ಶಾ.ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಹಾಸನದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಗುರುಪ್ರಸಾದ್ ಕೆ ಸ್ವಸ್ತಿ ವಾಚನ ನೀಡಲಿದ್ದಾರೆ.

ಸಂಜೆ 6ಗಂಟೆಯಿಂದ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಸಂಜೆ, ಬಳಿಕ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನ, ರಾತ್ರಿ 9.30ರಿಂದ ಶಾಲಾ ವಿದ್ಯಾರ್ಥಿಗಳಿಂದ ಜಾನಪದ ಕಲಾ ವೈಭವ, ರಾತ್ರಿ 11-30ರಿಂದ ಶಾಲಾ ವಿದ್ಯಾರ್ಥಿಗಳಿಂದ ನಾಟಕ ಬರ್ಬರಿಕ ಪ್ರದರ್ಶನಗೊಳ್ಳಲಿದೆ ಎಂದು ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ವಿ.ಕೆ ಶಿವರಾಮ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಕಲ್ಪನಾ ಶೆಟ್ಟಿ, ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ಆಶಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ, ವಿದ್ಯಾರ್ಥಿ ನಾಯಕ ಪ್ರತೀಕ್ಷ್ ಎಂ.ಡಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!